ಶುಕ್ರವಾರ, ಜೂನ್ 18, 2021
23 °C

ಟಿಡಿಪಿ ಮುಖಂಡರ ಬಂಧನ ಖಂಡಿಸಿ ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಮರಾವತಿ: ಮಾಜಿ ಸಚಿವ, ಟಿಡಿಪಿ ಮುಖಂಡ ಕೆ.ಅಚ್ಚನ್ನಾಯ್ಡು ಸೇರಿದಂತೆ ಪಕ್ಷದ ಮುಖಂಡರನ್ನು ಬಂಧಿಸಿರುವ ಸರ್ಕಾರದ ಕ್ರಮ ಖಂಡಿಸಿ ಮಾಜಿ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಶಾಸಕರು ಪ್ರತಿಭಟನೆ ನಡೆಸಿದರು. 

ಮಂಗಳವಾರ ವಿಧಾನಸಭೆಗೆ ತೆರಳುವ ಮುನ್ನ ಟಿಡಿಪಿ ಪಕ್ಷದ ಸಂಸ್ಥಾಪಕ ಎನ್‌.ಟಿ.ರಾಮರಾವ್‌ ಪುತ್ಥಳಿಗೆ ಗೌರವ ಸಲ್ಲಿಸಿದರು. ಬಳಿಕ ಪಕ್ಷದ ಮೂಖಂಡರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಘೋಷಣೆ ಕೂಗಿದರು. 

ಇಎಸ್‌ಐ ವೈದ್ಯಕೀಯ ಪರಿಕರಗಳ ಖರೀದಿ ಕುರಿತ ₹ 150 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಟಿಡಿಪಿ ಮುಖಂಡ ಕೆ.ಅಚ್ಚನ್ನಾಯ್ಡು ಮತ್ತು ಇತರ ಐವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜೂನ್‌ 12 ರಂದು (ಶುಕ್ರವಾರ) ಬಂಧಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು