ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಜೆ ತೆರೆಯಲಿದೆ ಅಯ್ಯಪ್ಪ ಸ್ವಾಮಿ ದೇಗುಲ: ಐವರು ಮಹಿಳೆಯರು ಪಂಪದಿಂದ ವಾಪಸ್

Last Updated 16 ನವೆಂಬರ್ 2019, 10:28 IST
ಅಕ್ಷರ ಗಾತ್ರ

ಶಬರಿಮಲೆ: ಕೇರಳದ ಪ್ರಸಿದ್ಧ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲನ್ನು ವಿಶೇಷ ಪೂಜೆಗಾಗಿ ಶನಿವಾರ ಸಂಜೆ ಐದು ಗಂಟೆಗೆ ತೆರೆಯಲಾಗುವುದು. ದೇವಾಲಯ ಪ್ರವೇಶಕ್ಕೆ ಬಂದಿದ್ದ ಐವರು ಮಹಿಳೆಯರನ್ನು ವಾಪಸ್ ಕಳುಹಿಸಲಾಗಿದೆ.

ದೇವಾಲಯ ಪ್ರವೇಶಕ್ಕೆ ತೆರಳಿದ್ದ ಐವರು ಮಹಿಳೆಯರನ್ನು ಪಂಪದಲ್ಲಿ ಅಯ್ಯಪ್ಪ ಭಕ್ತರು ತಡೆದಿದ್ದಾರೆ. ನಂತರ ಪೊಲೀಸರು ಅವರನ್ನು ವಾಪಸು ಕಳುಹಿಸಿದ್ದಾರೆ.

ಇಂದಿನಿಂದಎರಡು ತಿಂಗಳ ಅವಧಿಯ ಶಬರಿಮಲೆ ತೀರ್ಥಯಾತ್ರೆ ಋತು ಆರಂಭವಾಗಲಿದೆ. ಈ ಬಾರಿಯೂ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ದೇವಸ್ಥಾನದೊಳಗೆ ಪ್ರವೇಶ ಲಭಿಸುವುದು ಅನುಮಾನ ಎನಿಸಿದೆ.

‘ಶಬರಿಮಲೆ ಕುರಿತು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ನೀಡಿರುವ ತೀರ್ಪಿನಲ್ಲಿ ಕೆಲವು ಗೊಂದಲಗಳಿವೆ. ಸರ್ಕಾರವು ಕಾನೂನು ತಜ್ಞರ ಜೊತೆ ಈ ಬಗ್ಗೆ ಸಮಾಲೋಚನೆ ನಡೆಸಲಿದೆ. ದೇವಸ್ಥಾನದೊಳಗೆ ಪ್ರವೇಶಿಸಲೇಬೇಕು ಎನ್ನುವ ಮಹಿಳೆಯರು ನ್ಯಾಯಾಲಯದಿಂದ ಆದೇಶ ಪಡೆದುಕೊಳ್ಳಬೇಕು’ ಎಂದು ಕೇರಳದ ಮುಜರಾಯಿ ಸಚಿವ ಕಡಕಂಪಳ್ಳಿ ಸುರೇಂದ್ರನ್‌ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನ ಮರು ಪರಿಶೀಲನಾ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ಒಪ್ಪಿಸುವ ತೀರ್ಪಿಗೆ ನಾರಿಮನ್‌ ಭಿನ್ನಮತದ ತೀರ್ಪನ್ನು ನೀಡಿರುವುದು ಗೊಂದಲಗಳಿಗೆ ಕಾರಣವಾಗಿದೆ. ಇತ್ತ ಕೇರಳ ಸರ್ಕಾರ ದೇವಾಲಯ ಪ್ರವೇಶಿಸುವ ಮಹಿಳೆಯರಿಗೆ ಪೊಲೀಸ್‌ ಭದ್ರತೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಭೂಮಾತ ಬ್ರಿಗೇಡ್‌ನ ತೃಪ್ತಿ ದೇಸಾಯಿ ಹಾಗೂ ತಮಿಳುನಾಡಿನ ಮನಿತಿ ಸಂಘಂ ಸಂಘಟನೆಯ ಮಹಿಳೆಯರುದೇವಾಲಯ ಪ್ರವೇಶಿಸುವುದಕ್ಕೆ ಆನ್‌ಲೈನ್‌ನಲ್ಲಿ ಬುಕ್ ಮಾಡಿದ್ದಾರೆ. ಒಟ್ಟು 45 ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ.

ದೇಗುಲದ ಪರಿಸರ ಸೇರಿದಂತೆ ಪಂಪಾ ಹಾಗೂ ಶಬರಿಗಿರಿಯಲ್ಲಿ ಭಾರಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಇನ್ನು ಎರಡು ತಿಂಗಳು ಭಕ್ತರಿಗೆ ದೇವಾಲಯ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸಂಕ್ರಾಂತಿ ಬಳಿಕ ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT