ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ದರ ಏರಿಕೆ: ಕರ್ನಾಟಕ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ

Last Updated 5 ಜನವರಿ 2019, 13:35 IST
ಅಕ್ಷರ ಗಾತ್ರ

ನವದೆಹಲಿ: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಏರಿಸಿರುವ ಕರ್ನಾಟಕ ಸರ್ಕಾರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಶನಿವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

‘ರಾಜ್ಯದಲ್ಲಿ ರೈತರು ಸಾಯುತ್ತಿದ್ದಾರೆ, ದಲಿತರು ದನಿ ಕಳೆದುಕೊಂಡಿದ್ದಾರೆ. ಸಾಮಾನ್ಯ ಜನರು ತೆರಿಗೆಗಳ ತುಳಿತಕ್ಕೆ ಒಳಗಾಗಿದ್ಧಾರೆ. ಹೀಗಿರುವಾಗ ಭ್ರಷ್ಟ ಹಾಗೂ ಅಸಮರ್ಥ ಸರ್ಕಾರಕ್ಕೆ ಜನರು ಏಕೆ ಹೆಚ್ಚುವರಿ ಹಣ ಪಾವತಿಸಬೇಕು ಎಂದು ಅವರು’ ಪ್ರಶ್ನಿಸಿದ್ದಾರೆ.

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ದರವನ್ನು ರಾಜ್ಯ ಸರ್ಕಾರವು ಕ್ರಮವಾಗಿ ಶೇ 32 ಹಾಗೂ ಶೇ 21ರಷ್ಟು ಹೆಚ್ಚಿಸಿದ್ದಕ್ಕೆ ಅಮಿತ್ ಶಾ ಈ ಪ್ರತಿಕ್ರಿಯೆ ನೀಡಿದ್ಧಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT