ಭಾನುವಾರ, ಜನವರಿ 19, 2020
27 °C

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರ: ಮಮತಾ, ರಾಹುಲ್‌ಗೆ ಅಮಿತ್‌ ಶಾ ಸವಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಬಲ್‌ಪುರ (ಮಧ್ಯಪ್ರದೇಶ): ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ಅವರು, ‘ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನದಿಂದ ಈ ದೇಶದ ಯಾವುದೇ ನಾಗರಿಕನ ಪೌರತ್ವ ರದ್ದಾಗಲಿದೆ ಎಂಬುದನ್ನು ಮಮತಾ ಬ್ಯಾನರ್ಜಿ ಅಥವಾ ರಾಹುಲ್‌ ಗಾಂಧಿ ಅವರು ಸಾಬೀತು ಮಾಡಿ ತೋರಿಸಲಿ’ ಎಂದು ಅಮಿತ್‌ ಶಾ ಸವಾಲು ಹಾಕಿದ್ದಾರೆ. 

‘ಪಾಕಿಸ್ತಾನದಲ್ಲಿ ತುಳಿತಕ್ಕೆ ಒಳಗಾದ ಹಿಂದೂ, ಕ್ರೈಸ್ತ, ಸಿಖ್‌ ಮತ್ತು ಬೌದ್ಧ ಧರ್ಮಗಳಿಗೆ ಸೇರಿರುವ ವ್ಯಕ್ತಿಗಳಿಗೆ ಭಾರತೀಯ ಪೌರತ್ವ ಸಿಗುವವರೆಗೂ ನಾವು ಸುಮ್ಮನೇ ಕುಳಿತುಕೊಳ್ಳುವುದಿಲ್ಲ’ ಎಂದು ಕೇಂದ್ರ ಗೃಹ ಸಚಿವರು ಹೇಳಿದ್ದಾರೆ. 

ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್‌ ಮತ್ತು ಟಿಎಂಸಿ ಪಕ್ಷಗಳು ತೀವ್ರವಾಗಿ ವಿರೋಧಿಸುತ್ತಿವೆ.  

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು