ಸೋಮವಾರ, ಜೂನ್ 27, 2022
26 °C

ವಿವಾದ ಸೃಷ್ಟಿಸುವ ಹೇಳಿಕೆಗಳಿಂದ ದೂರವಿರಿ:ಗಿರಿರಾಜ್ ಸಿಂಗ್‌ಗೆ ಅಮಿತ್ ಶಾ ತಾಕೀತು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಆಯೋಜಿಸಿದ್ದ ಇಫ್ತಾರ್ ಕೂಟದ ಬಗ್ಗೆ ಕೇಂದ್ರ ಸಚಿವ ಗಿರಿರಾಜ್ ಅವರ ಟ್ವೀಟ್ ವಿವಾದ ಸೃಷ್ಟಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ  ಈ ರೀತಿಯ ಹೇಳಿಕೆಗಳಿಂದ ದೂರವಿರಿ ಎಂದು ಹೇಳಿದ್ದಾರೆ.

ಅಮಿತ್ ಶಾ ಅವರು ಗಿರಿರಾಜ್ ಸಿಂಗ್ ಅವರಿಗೆ ಫೋನ್ ಮಾಡಿ ಈ ರೀತಿಯ ಹೇಳಿಕೆ ನೀಡಬೇಡಿ ಎಂದು ಹೇಳಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮಾಧ್ಯಮಗಳು ಸುದ್ದಿ ಮಾಡಲಿ ಎಂಬ ಕಾರಣಕ್ಕಾಗಿ ಗಿರಿರಾಜ್ ಸಿಂಗ್ ಇದೆಲ್ಲಾ ಮಾಡುತ್ತಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನೇತಾರ ನಿತೀಶ್ ಕುಮಾರ್ ಪ್ರತಿಕ್ರಿಯಿಸಿದ್ದರು. ನಿತೀಶ್ ಕುಮಾರ್ ಪ್ರತಿಕ್ರಿಯೆ ಬೆನ್ನಲ್ಲೇ ಅಮಿತ್ ಶಾ ಅವರು ಗಿರಿರಾಜ್ ಸಿಂಗ್‌ಗೆ ತಾಕೀತು ನೀಡಿದ್ದಾರೆ.

ಇದನ್ನೂ ಓದಿ: ಇಫ್ತಾರ್‌ ಮಾತ್ರ ಯಾಕೆ? ನವರಾತ್ರಿಗೂ ಮಾಡಬಹುದಿತ್ತಲ್ಲವೇ?: ಗಿರಿರಾಜ್ ಸಿಂಗ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು