ಶನಿವಾರ, ಜುಲೈ 31, 2021
25 °C

ಕೋವಿಡ್‌ ಪರಿಸ್ಥಿತಿ | ದೆಹಲಿ ಸಿಎಂ ಕೇಜ್ರಿವಾಲ್ ಜೊತೆ ಅಮಿತ್ ಶಾ ಸಭೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಬೆಳಿಗ್ಗೆ 11ಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಇತರರೊಂದಿಗೆ ಸಭೆ ನಡೆಸಿ, ದೆಹಲಿಯಲ್ಲಿ ಕೋವಿಡ್‌–19 ಪರಿಸ್ಥಿತಿ ಕುರಿತು ಚರ್ಚೆ ನಡೆಸಲಿದ್ದಾರೆ. 

ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 36 ಸಾವಿರಕ್ಕೆ ತಲುಪಿದ್ದು, ಇದುವರೆಗೆ 1,200ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಭೆ ಕರೆಯಲಾಗಿದೆ.

ಸಭೆ ಕುರಿತು ಅಮಿತ್ ಶಾ ಕಚೇರಿಯ ಮೂಲಗಳು ಟ್ವೀಟ್ ಮಾಡಿದ್ದು, ಸಭೆಯಲ್ಲಿ ದೆಹಲಿಯ ಏಮ್ಸ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಹಾಜರಿರುತ್ತಾರೆ ಎಂದು ತಿಳಿಸಿದೆ. 

‘ಸೋಂಕು ಪತ್ತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ನಡೆಸಲು ಎಲ್ಲಾ ಲ್ಯಾಬೊರೋಟರಿಗಳಿಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅನುಮತಿ ನೀಡಬೇಕು. ಈ ಸಂಬಂಧ ಐಸಿಎಂಆರ್ ತನ್ನ ಮಾರ್ಗಸೂಚಿಗಳನ್ನು ಬದಲಾಯಿಸಬೇಕು’ ಸಭೆಯಲ್ಲಿ ಆಮ್‌ ಆದ್ಮಿ ಪಕ್ಷ ಒತ್ತಾಯಿಸುವ ನಿರೀಕ್ಷೆ ಇದೆ. 

ಮಾರ್ಗಸೂಚಿ ಬದಲಾಯಿಸಬೇಕೆಂದು ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವರಿಗೆ ಈಗಾಗಲೇ ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಮತ್ತು ಎಎಪಿಯ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಪತ್ರ ಬರೆದಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು