ಗುರುವಾರ , ಸೆಪ್ಟೆಂಬರ್ 23, 2021
24 °C

301 ಕ್ಷೇತ್ರಗಳಲ್ಲಿ ಶಾ ಪ್ರವಾಸ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಈವರೆಗೆ 301 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದಾರೆ. ಇದಕ್ಕಾಗಿ ಅವರು 1.51 ಲಕ್ಷ ಕಿ.ಮೀ ಸಂಚರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

2014ರ ಆಗಸ್ಟ್‌ನಲ್ಲಿ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಶಾ ಅವರು ವ್ಯಾಪಕವಾಗಿ ಪ್ರವಾಸ ಮಾಡಿದ್ದಾರೆ. ಈವರೆಗೆ ಅವರು 10.17 ಲಕ್ಷ ಕಿ.ಮೀ. ಪ್ರಯಾಣಿಸಿದ್ದಾರೆ. ಒಟ್ಟು 1,542 ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. 

ಪಕ್ಷ ಸಂಘಟನೆಗಾಗಿ ಶಾ ಅವರು ಮೂರು ಬಾರಿ ಇಡೀ ದೇಶವನ್ನು ಸುತ್ತಿದ್ದಾರೆ. ಅವರ ಒಟ್ಟು ಪ್ರಯಾಣದಲ್ಲಿ ಶೇ 41ರಷ್ಟು ಪಕ್ಷ ಸಂಘಟನೆಗೆ ಸಂಬಂಧಿಸಿದ್ದು. ಶೇ 59ರಷ್ಟು ಪ್ರವಾಸಗಳನ್ನು ಚುನಾವಣಾ ಪ್ರಚಾರಕ್ಕಾಗಿ ಅವರು ಮಾಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು