ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್ಎಫ್‌ ಕೇಂದ್ರ ಕಚೇರಿಗೆ ಅಮಿತ್‌ ಶಾ ಭೇಟಿ, ಚರ್ಚೆ

Last Updated 13 ಡಿಸೆಂಬರ್ 2019, 20:15 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನವದೆಹಲಿಯಲ್ಲಿರುವ ಗಡಿ ಭದ್ರತಾ ಪಡೆಯ (ಬಿಎಸ್ಎಫ್‌) ಕೇಂದ್ರ ಕಚೇರಿಗೆ ಶುಕ್ರವಾರ ಭೇಟಿ ನೀಡಿ, ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಗಡಿಯಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯ ಕುರಿತು ಚರ್ಚೆ ನಡೆಸಿದರು.

ಲೋಧಿ ರಸ್ತೆಯಲ್ಲಿರುವ ಸಿಜಿಒ ಕಾಂಪ್ಲೆಕ್ಸ್‌ನಲ್ಲಿ ಗೃಹ ಸಚಿವರು ನಾಲ್ಕು ಗಂಟೆಗಳ ಕಾಲ ಮಾತುಕತೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ನಂತರ ಮೊದಲ ಬಾರಿಗೆ ದೇಶದ ಅತಿ ದೊಡ್ಡ ಸೇನಾಪಡೆಯ ಕಚೇರಿಗೆ ಶಾ ಭೇಟಿ ನೀಡಿದ್ದರು. ಡಿಸೆಂಬರ್‌ 1ರಂದು ನಡೆದ ಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿರಲಿಲ್ಲ.

ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಗಡಿಯಲ್ಲಿ ಯೋಧರ ನಿಯೋಜನೆಯ ಕುರಿತು ಗೃಹ ಸಚಿವರಿಗೆ ಸಂಪೂರ್ಣ ವಿವರ ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಸ್ಥಾಪಿಸಲಾಗಿರುವ ತಾಂತ್ರಿಕ ಸಾಧನ, ಪಾಕಿಸ್ತಾನ ಗಡಿಯಲ್ಲಿ ಈಚೆಗೆ ಕೈಗೊಂಡ ಕಾರ್ಯಾಚರಣೆ, ನುಸುಳುವಿಕೆ ಹಾಗೂ ಅಕ್ರಮ ಚಟುವಟಿಕೆಗಳ ಕುರಿತು ಷಾ ಮಾಹಿತಿ ಪಡೆದುಕೊಂಡರು.

‘ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲು ಹಾಗೂ ಎರಡೂ ದೇಶದ ಗಡಿಯಲ್ಲಿ ಇನ್ನಷ್ಟು ತಾಂತ್ರಿಕ ಸಾಧನ ಅಳವಡಿಸಲು ಸೂಚಿಸಿದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT