ಗುರುವಾರ , ಫೆಬ್ರವರಿ 25, 2021
20 °C

ವಲಸೆ ಕಾರ್ಮಿಕ ರೈಲಿಗೆ ತಡೆ: ಮಮತಾ ಬ್ಯಾನರ್ಜಿ ವಿರುದ್ಧ ಅಮಿತ್ ಶಾ ಅಸಮಾಧಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಲಸೆ ಕಾರ್ಮಿಕರು ತುಂಬಿದ್ದ ರೈಲನ್ನು ಪಶ್ಚಿಮಬಂಗಾಳದ ಒಳಬರಲು ಬಿಡದೆ ವಲಸೆ ಕಾರ್ಮಿಕರಿಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಸಂಬಂಧ ಪಶ್ಚಿಮ ಬಂಗಾಳ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ನಿರೀಕ್ಷಿಸಿದಷ್ಟು ಬೆಂಬಲ ಸಿಗುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಪತ್ರದ ಮುಖೇನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳದ ವಿವಿಧ ಕಡೆಗಳಿಂದ ದೇಶದ ಹಲವು ಕಡೆಗಳಿಗೆ ಕೆಲಸಕ್ಕಾಗಿ ತೆರಳಿದ್ದ 2 ಲಕ್ಷ ವಲಸೆ ಕಾರ್ಮಿಕರು ಲಾಕ್‌ಡೌನ್ ಸಂಬಂಧ ತಮ್ಮ ತವರು ರಾಜ್ಯಕ್ಕೆ ಕಳುಹಿಸಿಕೊಡಲು ಕೇಂದ್ರ ಸರ್ಕಾರ ಎಲ್ಲಾ ವ್ಯವಸ್ಥೆ ಮಾಡಿದೆ. ಆದರೆ, ಪಶ್ಚಿಮ ಬಂಗಾಳ ಸರ್ಕಾರ ವಲಸೆ ಕಾರ್ಮಿಕರಿದ್ದ ರೈಲು ಪ್ರವೇಶ ನಿರ್ಬಂಧ ವಿಧಿಸಿ ಅಸಹಕಾರ ತೋರಿಸಿದೆ. ಅಲ್ಲದೆ, ಇದು ವಲಸೆ ಕಾರ್ಮಿಕರಿಗೆ ಮಾಡಿದ ಅನ್ಯಾಯ, ಇದು ಮತ್ತೊಂದು ಸಮಸ್ಯೆಯನ್ನು ತಂದೊಡ್ಡುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಹಾಗೂ ಕೇಂದ್ರ ಸರ್ಕಾರಗಳ ನಡುವೆ ವಲಸೆ ಕಾರ್ಮಿಕ ಸಮಸ್ಯೆ ಮತ್ತೊಂದು ಅಸಮಾಧಾನಕ್ಕೆ ಕಾರಣವಾಗಿದೆ. ಕೊರೊನಾ ಸೋಂಕನ್ನು ನಿಯಂತ್ರಿಸುವ ಪಶ್ಚಿಮ ಬಂಗಾಳ ರಾಜ್ಯದ ಪ್ರಯತ್ನಗಳ ನಡುವೆ ವಲಸೆ ಕಾರ್ಮಿಕರ ಸಮಸ್ಯೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.

ಕೊರೊನಾ ಸೋಂಕಿನಿಂದ ಉಂಟಾದ ಸಾವುಗಳ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪರಸ್ಪರ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಲೇ ಇದ್ದಾರೆ. ಒಂದೆಡೆ ಸಾರ್ವಜನಿಕ ಆರೋಗ್ಯ ಸಮಸ್ಯೆಯನ್ನು ಕೇಂದ್ರ ಸರ್ಕಾರ ರಾಜಕೀಯವನ್ನಾಗಿ ಪರಿವರ್ತಿಸಲು ಯತ್ನಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದರೆ, ಮತ್ತೊಂದು ಕಡೆ ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ ಸರ್ಕಾರ ಹೊರಡಿಸುವ ನಿಯಮಗಳನ್ನು ಜಾರಿಗೆ ತರದೆ ಪಶ್ಚಿಮಬಂಗಾಳ ಅಧಿಕಾರಿಗಳು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಕೇಂದ್ರ ಆರೋಪಿಸುತ್ತಿದೆ.

ಪಶ್ಚಿಮ ಬಂಗಾಳ ಸರ್ಕಾರದಲ್ಲಿ ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಸಮರ್ಪಕ ಪರೀಕ್ಷೆಗಳನ್ನು ನಡೆಸಲು ಹಾಗೂ ಹಾಟ್ ಸ್ಪಾಟ್‌ಗಳನ್ನು ಗುರುತಿಸುವ ಕೆಲಸ ನಡೆಯುತ್ತಿಲ್ಲ ಎಂದು ಕೇಂದ್ರದ ಅಧಿಕಾರಿಗಳು ಆರೋಪಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು