ಬುಧವಾರ, ಜನವರಿ 22, 2020
25 °C

ಪೌರತ್ವ ತಿದ್ದುಪಡಿ ಕಾನೂನಿನ ನಂತರ ಕಾಂಗ್ರೆಸ್‌ಗೆ ಹೊಟ್ಟೆ ನೋವು ಶುರು: ಅಮಿತ್ ಶಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಂಚಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ(ನವೆಂಬರ್ 12) ಸಹಿ ಹಾಕಿದಂದಿನಿಂದಲೂ ಈಶಾನ್ಯ ರಾಜ್ಯಗಳಲ್ಲಿ ಕಾನೂನಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈಶಾನ್ಯ ರಾಜ್ಯಗಳ ಸಂಸ್ಕೃತಿ, ಸಾಮಾಜಿಕ ಗುರುತು, ಭಾಷೆ ಮತ್ತು ರಾಜಕೀಯ ಹಕ್ಕಿಗೆ ಯಾವುದೇ ಧಕ್ಕೆ ಉಂಟು ಮಾಡುವುದಿಲ್ಲ ಎಂದು ಹೇಳಿದ್ದಾರೆ.

ದೆಹಲಿಯಲ್ಲಿಂದು 'ಭಾರತ ಉಳಿಸಿ' ರ್‍ಯಾಲಿಯನ್ನು ಕೈಗೊಂಡಿರುವ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯ ಬಳಿಕ ಕಾಂಗ್ರೆಸ್‌ಗೆ ಹೊಟ್ಟೆ ನೋವು ಶುರುವಾಗಿದೆ ಎಂದು ದೂರಿದರು. 

ಜಾರ್ಖಂಡ್‌ನಲ್ಲಿಂದು ಚುನಾವಣೆ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಈ ಮೂಲಕ ಈಶಾನ್ಯ ರಾಜ್ಯಗಳಿಗೆ ಭರವಸೆ ನೀಡುತ್ತಿದ್ದೇನೆ. ಅವರ ಸಂಸ್ಕೃತಿ, ಸಾಮಾಜಿಕ ಅಸ್ಮಿತೆ, ಭಾಷೆ ಮತ್ತು ರಾಜಕೀಯ ಹಕ್ಕುಗಳನ್ನು ನಾವು ಮುಟ್ಟುವುದಿಲ್ಲ ಮತ್ತು ನರೇಂದ್ರ ಮೋದಿ ಸರ್ಕಾರವು ಅವುಗಳನ್ನು ರಕ್ಷಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಪೌರತ್ವ ತಿದ್ದುಪಡಿ ಮಸೂದೆ: ಈಶಾನ್ಯ ರಾಜ್ಯಗಳಲ್ಲಿ ಹಿಗ್ಗಿದ ವಿರೋಧ

ಈಶಾನ್ಯ ರಾಜ್ಯಗಳ ಪೈಕಿ ಬಿಜೆಪಿ ಆಡಳಿತವಿರುವ ಅಸ್ಸಾಂ ಮತ್ತು ಮೇಘಾಲಯದಲ್ಲಿ ನೆರೆಯ ರಾಷ್ಟ್ರಗಳಾದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದಿಂದ ಬರುವ ಮುಸ್ಲಿಮೇತರ ವಲಸಿಗರಿಗೆ ಭಾರತದ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಹಿಂಸಾಚಾರಕ್ಕೆ ಕಾರಣವಾಗಿದೆ. 

ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಅಸ್ಸಾಂನ ಗುವಾಹಟಿಯಲ್ಲಿ ಗುರುವಾರ ವಿಧಿಸಲಾಗಿದ್ದ ಕರ್ಫ್ಯೂವನ್ನು ಶನಿವಾರ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಸಡಿಲಗೊಳಿಸಲಾಗಿದೆ. ನಾಗಾಲ್ಯಾಂಡ್‌ನಲ್ಲಿ ನಾಗ ವಿದ್ಯಾರ್ಥಿ ಫೆಡರೇಷನ್ ಆರು ಗಂಟೆಗಳ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಶಾಲೆ ಮತ್ತು ಕಾಲೇಜುಗಳನ್ನು ಮುಚ್ಚಲಾಗಿದೆ. 

ಇದನ್ನೂ ಓದಿ: 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು