ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿಬಿಪಿ ಮುಖ್ಯ ಕಚೇರಿಗೆ ಮುಂದಿನ ವಾರ ಅಮಿತ್ ಶಾ ಭೇಟಿ

Last Updated 22 ನವೆಂಬರ್ 2019, 20:15 IST
ಅಕ್ಷರ ಗಾತ್ರ

ನವದೆಹಲಿ: ಇಂಡೊ ಟಿಬೆಟ್‌ ಗಡಿ ಪೊಲೀಸ್‌ (ಐಟಿಬಿಪಿ) ಮುಖ್ಯ ಕಚೇರಿಗೆ ಗೃಹ ಸಚಿವ ಅಮಿತ್‌ ಶಾ ಅವರು ಮುಂದಿನ ವಾರ ಭೇಟಿ ನೀಡಲಿದ್ದಾರೆ. ಅವರು, ಚೀನಾ ಜತೆಗಿನವಾಸ್ತವ ಗಡಿ ನಿಯಂತ್ರಣ ರೇಖೆ (ಎಲ್ಎಸಿ) ಯಲ್ಲಿನ ಕಾರ್ಯಾಚರಣೆ ಸಿದ್ಧತೆಯ ಪರಿಶೀಲನೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಇದೇ 26 ರಂದು ಲೋಧಿ ರಸ್ತೆಯಲ್ಲಿನ ಐಟಿಬಿಪಿ ಮುಖ್ಯಕಚೇರಿಗೆ ಭೇಟಿ ನೀಡಲಿದ್ದಾರೆ. ಇವರ ಜತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಜರಿರಲಿದ್ದಾರೆ. ಪ್ರಧಾನಿ ಮೋದಿ ಸಂಪುಟದಲ್ಲಿ ಗೃಹಸಚಿವರಾದ ನಂತರ ಶಾ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.

ಸಿಆರ್‌ಪಿಎಫ್‌ ಮುಖ್ಯ ಕಚೇರಿಗೆ ಕಳೆದ ವಾರ ಗೃಹ ಸಚಿವರು ಮೊದಲ ಬಾರಿಗೆ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT