ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಪನ್‌ ಚಂಡಮಾರುತದಿಂದ ಪಶ್ಚಿಮ ಬಂಗಾಳದಲ್ಲಿ 86 ಜನರ ಸಾವು: ಮಮತಾ ಬ್ಯಾನರ್ಜಿ

Last Updated 23 ಮೇ 2020, 10:36 IST
ಅಕ್ಷರ ಗಾತ್ರ

ಕೋಲ್ಕತ್ತ: ಅಂಪನ್‌ ಚಂಡಮಾರುತದ ಪರಿಣಾಮ ಪಶ್ಚಿಮ ಬಂಗಾಳದಲ್ಲಿ 86 ಜನರು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, 'ಅಂಪನ್‌ ಚಂಡಮಾರುತ ಒಂದು ವಿಪತ್ತಾಗಿದೆ. ರಾಜಕೀಯ ಮಾಡಲು ಇದು ಸರಿಯಾದ ಸಮಯವಲ್ಲ. ಅಂಪನ್‌ ಚಂಡಮಾರುತದಿಂದಾಗಿ ಕಡಿತಗೊಂಡಿರುವ ವಿದ್ಯುತ್‌ ಸಂಪರ್ಕವನ್ನು ಒದಗಿಸುವ ನಿಟ್ಟಿನಲ್ಲಿ ನಾವು ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತಿದ್ದೇವೆ. ಕೋಲ್ಕತ್ತ ವಿದ್ಯುತ್‌ ನಿಗಮದೊಂದಿಗೆ ಮಾತುಕತೆ ನಡೆಸಿದ್ದೇವೆ. ಜನರು ತಾಳ್ಮೆ ಕಾಪಾಡಿಕೊಳ್ಳುವಂತೆ ನಾನು ವಿನಂತಿಸುತ್ತೇನೆ' ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಂಗಾಳ ಮತ್ತು ಒಡಿಶಾದಲ್ಲಿ ಸುಮಾರು 6 ಲಕ್ಷ ಜನರನ್ನು ಪುನರ್ವಸತಿ ಕೇಂದ್ರಿಗಳಿಗೆ ಸ್ಥಳಾಂತರ ಮಾಡಲಾಗಿದೆ. ಅಲ್ಲಿ ಅವರಿಗೆ ಆಹಾರ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಒಟ್ಟು ಒಂದು ಲಕ್ಷ ಮನೆಗಳು ಸಂಪೂರ್ಣವಾಗಿ ನಾಶವಾಗಿವೆ. ಒಂದು ಕೋಟಿ ಜನರಿಗೆ ತೊಂದರೆಯಾಗಿದೆ ಎಂದು ಬಂಗಾಳ ಸರ್ಕಾರ ಹೇಳಿದೆ.

ಅಂಪನ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಸಂಭವಿಸಿರುವ ಹಾನಿಯನ್ನು ಕೂಡಲೇ ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ 22 ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT