ಸೋಮವಾರ, ಫೆಬ್ರವರಿ 24, 2020
19 °C

ಸೋನಿಯಾ ಗಣಿತ ಜ್ಞಾನ ಕಡಿಮೆ: ಅನಂತಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧದ ಅವಿಶ್ವಾಸ ಗೊತ್ತುವಳಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್‌ನ ಸೋನಿಯಾ ಗಾಂಧಿ ಅವರಿಗೆ ಗಣಿತದ ಜ್ಞಾನ ಕಡಿಮೆ’ ಎಂದು ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್‌ ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಎಷ್ಟು ಸಂಖ್ಯಾಬಲ ಹೊಂದಿದೆ ಎಂಬುದು ಸರ್ವವಿದಿತ. ಆದರೂ, ಅವಿಶ್ವಾಸ ಗೊತ್ತುವಳಿಗೆ ಬೆಂಬಲ ಸೂಚಿಸಿರುವ ಸೋನಿಯಾ ಅವರ ಗಣಿತ ಜ್ಞಾನದ ಬಗ್ಗೆ ಸಂಶಯ ಮೂಡುತ್ತಿದೆ ಎಂದು ವ್ಯಂಗ್ಯವಾಡಿದರು.

ಶುಕ್ರವಾರ ಲೋಕಸಭೆಯಲ್ಲಿ ನಡೆಯಲಿರುವ ಅವಿಶ್ವಾಸ ಗೊತ್ತುವಳಿ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್‌ ಮತ್ತಿತರ ವಿಪಕ್ಷಗಳು ಸಭಾತ್ಯಾಗ ಮಾಡದೆ, ಚರ್ಚೆಯು ತಾರ್ಕಿಕ ಅಂತ್ಯ ಕಾಣುವವರೆಗೂ ಭಾಗವಹಿಸಬೇಕು ಎಂದು ಕಟಕಿಯಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು