ಹೈದರಾಬಾದ್‌: ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಮುಖ್ಯಶಿಕ್ಷಕನಿಂದ ಅತ್ಯಾಚಾರ

7

ಹೈದರಾಬಾದ್‌: ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಮುಖ್ಯಶಿಕ್ಷಕನಿಂದ ಅತ್ಯಾಚಾರ

Published:
Updated:

ಹೈದರಾಬಾದ್‌: ಎರಡನೇ ತರಗತಿ ವಿದ್ಯಾರ್ಥಿನಿಯ ಮೇಲೆ 42 ವರ್ಷದ ಮುಖ್ಯಶಿಕ್ಷಕರೊಬ್ಬರು ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.

ಕೃಷ್ಣಾ ಜಿಲ್ಲೆಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರೊಬ್ಬರು ಎಂಟು ವರ್ಷ ವಿದ್ಯಾರ್ಥಿಯನ್ನು ಖಾಲಿ ಕೋಣೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಬಟ್ಟೆಯ ಮೇಲೆ ರಕ್ತದ ಕಲೆಗಳನ್ನು ಕಂಡು ಗಾಬರಿಗೊಂಡ ಪೋಷಕರು ಬಾಲಕಿಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ರಕ್ತಸ್ರಾವ ತಡೆಯಲು ನಾಲ್ಕು ಹೊಲಿಕೆಗಳನ್ನು ಹಾಕಲಾಗಿದೆ. ಪ್ರಕರಣ ಸಂಬಂಧ ಬಾಲಕಿಯ ಪೋಷಕರು ದೂರು ದಾಖಲಿಸಿರಲಿಲ್ಲ. ಅಪರಾಧ ಕುರಿತು ಬಾಲಕಿ ತಾಯಿಗೆ ಮನವರಿಕೆ ಮಾಡಿದ ಸಾಮಾಜಿಕ ಕಾರ್ಯಕರ್ತರು ಗುರುವಾರ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಗಾಂಟಾ ಶ್ರೀನಿವಾಸ್, ‘ಕೃತ್ಯ ಎಸಗಿರುವ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಿ, ಘಟನೆ ಕುರಿತು ಸಮಗ್ರ ತನಿಖೆ ನಡೆಸುವಂತೆ‌ ಶಾಲಾ ಆಯುಕ್ತರಿಗೆ ಆದೇಶಿಸಲಾಗಿದೆ’ ಎಂದು ಹೇಳಿದರು.

ಆರೋಪಿಯನ್ನು ತಕ್ಷಣವೇ ಕರ್ತವ್ಯದಿಂದ ವಜಾಗೊಳಿಸಲಾಗಿದೆ. ಘಟನೆ ಬಗ್ಗೆ ಇಲಾಖೆ ಮಟ್ಟದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ ಎಂದು ಜಿಲ್ಲಾ ಶಿಕ್ಷಣ ಅಧಿಕಾರಿ ಎಂ.ವಿ.ರಾಜ್ಯ ಲಕ್ಷ್ಮಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 2

  Sad
 • 0

  Frustrated
 • 20

  Angry

Comments:

0 comments

Write the first review for this !