ಜಗನ್‌ಗೆ ಚೂರಿ ಇರಿತ ಪ್ರಕರಣ: ತನಿಖೆ ಎನ್ಐಎಗೆ

7

ಜಗನ್‌ಗೆ ಚೂರಿ ಇರಿತ ಪ್ರಕರಣ: ತನಿಖೆ ಎನ್ಐಎಗೆ

Published:
Updated:

ಹೈದರಾಬಾದ್‌: ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ ಮೇಲೆ ನಡೆದ ಚೂರಿ ಇರಿತ ಪ್ರಕರಣದ ತನಿಖೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಒಪ್ಪಿಸಿದೆ.

ಆಂಧ್ರಪ್ರದೇಶ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಸದ್ಯ ಈ ಪ್ರಕರಣದ ತನಿಖೆ ನಡೆಸುತ್ತಿದೆ.

ರಾಜ್ಯ ಪೊಲೀಸರ ತನಿಖೆಯಲ್ಲಿ ವಿಶ್ವಾಸವಿಲ್ಲ. ತನಿಖೆಯನ್ನು ಕೇಂದ್ರ ತನಿಖಾ ತಂಡಕ್ಕೆ ಒಪ್ಪಿಸಬೇಕೆಂದು ಜಗನ್‌ ನ್ಯಾಯಾಲಯವನ್ನು ಕೋರಿದ್ದರು.

ವಿಶಾಖಪಟ್ಟಣ ವಿಮಾನನಿಲ್ದಾಣದಲ್ಲಿ ಅಕ್ಟೋಬರ್‌ 25ರಂದು ಜಗನ್‌ ಮೇಲೆ ಚೂರಿ ಇರಿತ ನಡೆದಿತ್ತು.


ಆರೋಪಿಯಿಂದ ವಶಕ್ಕೆ ಪಡೆದ ಆಯುಧ

 

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !