ಆಂಧ್ರದಲ್ಲಿ ಟಿಡಿಪಿ ಧೂಳೀಪಟ, ಜಗನಮೋಹನ್ ರೆಡ್ಡಿಗೆ ಸಿಎಂ ಪಟ್ಟ ಖಚಿತ

ಗುರುವಾರ , ಜೂನ್ 27, 2019
29 °C

ಆಂಧ್ರದಲ್ಲಿ ಟಿಡಿಪಿ ಧೂಳೀಪಟ, ಜಗನಮೋಹನ್ ರೆಡ್ಡಿಗೆ ಸಿಎಂ ಪಟ್ಟ ಖಚಿತ

Published:
Updated:

ಆಂಧ್ರಪ್ರದೇಶ: ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಾಣುವುದು ಖಚಿತವಾದ ಹಿನ್ನೆಲೆಯಲ್ಲಿ ಚಂದ್ರಬಾಬುನಾಯ್ಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಸಂಜೆ ವೇಳೆಗೆ ರಾಜ್ಯಪಾಲರನ್ನು ಭೇಟಿ ಮಾಡಿ ಅಧಿಕೃತವಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಇತ್ತ ವೈಎಸ್ ಆರ್ ಕಾಂಗ್ರೆಸ್ ನ ಜಗನ್ ಮೋಹನ್ ರೆಡ್ಡಿ ಸಿಎಂ ಸ್ಥಾನಕ್ಕೇರಲು ಸಿದ್ಧತೆ ನಡೆದಿದೆ. ವೈಎಸ್ ಆರ್ ಕಾಂಗ್ರೆಸ್ ಪಕ್ಷ 150 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿಕೊಂಡಿದ್ದರೆ, ಇದರ ಸಂಪ್ರದಾಯಿಕ ಎದುರಾಳಿ ತೆಲುಗು ದೇಶಂ ಪಾರ್ಟಿ 23 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಂಧ್ರಪ್ರದೇಶದಲ್ಲಿ ಅಚ್ಚರಿಯ ಫಲಿತಾಂಶ ಕಂಡು ಬಂದಿದೆ. ಇದು ಚಂದ್ರಬಾಬುನಾಯ್ಡು ಅವರ ಕನಸಿಗೆ ತಣ್ಣೀರು ಎರಚಿದಂತಾಗಿದೆ.

ಆಂಧ್ರಪ್ರದೇಶದಲ್ಲಿ ವೈಎಸ್ ಆರ್ ಕಾಂಗ್ರೆಸ್ ತನ್ನ ಅಭೂತಪೂರ್ವ ಜಯ ಸಾಧಿಸಲು ಹಲವು ಕಾರಣಗಳಿವೆ. ಕಳೆದ ಐದು ವರ್ಷಗಳಿಂದ ಸತತವಾಗಿ ರಾಜ್ಯದ ಜನರ ಒಡನಾಟದಲ್ಲಿದ್ದದ್ದೂ ಕೂಡ ವೈಎಸ್ ಆರ್ ಕಾಂಗ್ರೆಸ್‌ ವೈ.ಎಸ್. ಜಗನ್ ಮೋಹನ್ ರೆಡ್ಡಿ ಬಹುಮತ ಇಷ್ಟೊಂದು ಪ್ರಮಾಣದಲ್ಲಿ ಗೆಲುವು ಸಾಧಿಸಲು ಕಾರಣ ಎನ್ನಲಾಗಿದೆ. ಚಂದ್ರಬಾಬು ನಾಯ್ಡು ಬಿಜೆಪಿಗೆ ಬೆಂಬಲ ನೀಡಿ ವಾಪಸ್ ತೆಗೆದುಕೊಂಡ ಚಂದ್ರಬಾಬು ನಾಯ್ಡು ಅವರ ನಡೆ ಕೂಡ ಈ ಬಾರಿಯ ವಿಧಾನಸಭಾ ಚುನಾವಣೆಯ ಮೇಲೆ ಪರಿಣಾಮ ಬೀರಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆಂಧ್ರಪ್ರದೇಶದಲ್ಲಿ ದಲಿತರು, ಮುಸ್ಲಿಂ ಸೇರಿದಂತೆ ಎಲ್ಲಾ ಸಮುದಾಯವನ್ನು ಸಮಾನ ದೃಷ್ಟಿಯಲ್ಲಿ ನೋಡಿದ್ದು ವೈಎಸ್ ಜಗನ್ ಮೋಹನ್ ರೆಡ್ಡಿ ಪಕ್ಷಕ್ಕೆ ಮತಗಳು ಹರಿದು ಬರಲು ಕಾರಣ ಎನ್ನಲಾಗಿದೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಅಕ್ರಮಗಳ ಆರೋಪಗಳು ಕೇಳಿಬಂದಿದ್ದು ಕೂಡ ಜನರಲ್ಲಿ ನಾಯ್ಡು ಬಗ್ಗೆ ಅಸಮಾಧಾನ ಉಂಟಾಗಲು ಕಾರಣ ಎನ್ನಲಾಗಿದೆ.

ಚಂದ್ರಬಾಬುನಾಯ್ಡು ಎನ್ ಡಿಎಗೆ ಬೆಂಬಲ ವಾಪಸ್ ತೆಗೆದುಕೊಂಡ ಬಳಿಕ, ವೈಎಸ್‌‌ಆರ್ ಜಗನ್ ಮೋಹನ್ ರೆಡ್ಡಿ ಎನ್‌‌ಡಿಎಗೆ ಬೆಂಬಲ ನೀಡಿದ್ದಾರೆ. ಈ ಬಾರಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಆಂಧ್ರಪ್ರದೇಶದಲ್ಲೂ ಅಭಿವೃದ್ದಿಯಾಗಬಹುದು ಎಂಬುದು ಕೂಡ ಇಲ್ಲಿನ ಮತದಾರನ ನಿರೀಕ್ಷೆಗಳಲ್ಲಿ ಒಂದಾಗಿದೆ.

ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ವೈಎಸ್ ರಾಜಶೇಖರ ರೆಡ್ಡಿಯವರಂತೆ ಜನಪ್ರಿಯ ಮುಖ್ಯಮಂತ್ರಿಯಾಗುತ್ತಾರಾ ಕಾದು ನೋಡಬೇಕಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 9

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !