ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ: ಪುನರ್‌ಸ್ಥಾಪನೆ ಅಧಿಕಾರ ರಾಜ್ಯಗಳಿಗೆ

Last Updated 22 ಜೂನ್ 2019, 19:45 IST
ಅಕ್ಷರ ಗಾತ್ರ

ನವದೆಹಲಿ: ಗರ್ಭಿಣಿಯರು ಹಾಗೂ ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳನ್ನು ಪುನರ್‌ಸ್ಥಾಪನೆ ಮಾಡುವ ಅಧಿಕಾರವನ್ನು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಗರ್ಭಿಣಿಯರು ಹಾಗೂ ಮಕ್ಕಳು ಸುಲಭವಾಗಿ ಅಂಗನವಾಡಿ ಕೇಂದ್ರಗಳನ್ನು ತಲುಪಬೇಕು. ಆ ಮೂಲಕ ಅಲ್ಲಿನ ಸೌಲಭ್ಯಗಳೂ ಸುಲಭವಾಗಿ ಸಿಗುವಂತಾಗಬೇಕು ಎಂಬ ಉದ್ದೇಶದಿಂದ ಕೇಂದ್ರ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ನಗರ ಪ್ರದೇಶಗಳಲ್ಲಿ ಫಲಾನುಭವಿಗಳು ವಾಸಿಸುವ ಪ್ರದೇಶದಿಂದ ಅಂಗನವಾಡಿ ಕೇಂದ್ರ 5 ಕಿ.ಮೀ.ಗಿಂತ ಹೆಚ್ಚು ದೂರ ಇರಬಾರದು. ಪಟ್ಟಣ ಪ್ರದೇಶದಲ್ಲಿ 3 ಕಿ.ಮೀ. ಹಾಗೂ ಬುಡಕಟ್ಟು ಜನರು ವಾಸಿಸುವ ಸ್ಥಳಗಳಲ್ಲಿ 1.5 ಕಿ.ಮೀ.ಗಿಂತ ಹೆಚ್ಚು ದೂರ ಇರಬಾರದು ಎಂದು ಇವೇ ಮೂಲಗಳು ತಿಳಿಸಿವೆ.

ಮುಖ್ಯಾಂಶಗಳು

* 10 ಕೋಟಿಅಂಗನವಾಡಿಯಲ್ಲಿನ ಸೌಲಭ್ಯ ಪಡೆಯುವ ಫಲಾನುಭವಿಗಳ ಸಂಖ್ಯೆ

* 14 ಲಕ್ಷ ಮಂಜೂರಾಗಿರುವ ಅಂಗನವಾಡಿಗಳ ಸಂಖ್ಯೆ

* 26 ಲಕ್ಷ ಅಂಗನವಾಡಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT