ಶುಕ್ರವಾರ, ಏಪ್ರಿಲ್ 3, 2020
19 °C

ದೆಹಲಿ ಹಿಂಸಾಚಾರ: ಐಬಿ ಅಧಿಕಾರಿ ಅಂಕಿತ್ ಶರ್ಮ ಅಂತ್ಯಕ್ರಿಯೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಮುಜಾಫರ‌‌ನಗರ(ಉತ್ತರ ಪ್ರದೇಶ): ದೆಹಲಿ ಹಿಂಸಾಚಾರದಲ್ಲಿ ಸಿಲುಕಿ ಸಾವಿಗೀಡಾಗಿದ್ದ ಐಬಿ ಅಧಿಕಾರಿ ಅಂಕಿತ್ ಶರ್ಮ ಅವರ ಅಂತ್ಯ ಸಂಸ್ಕಾರದಲ್ಲಿ ದೆಹಲಿ ಪೊಲೀಸರು ಹಾಗೂ ಕೇಂದ್ರ ಸಚಿವ ಸಂಜೀವ್ ಬಾಲ್ಯನ್ ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.


ಪಾರ್ಥೀವ ಶರೀರದ ಎದುರು ಅಧಿಕಾರಿಗಳ ಮೌನಾಚರಣೆ

ಫೆ.26ರಂದು ಈಶಾನ್ಯ ದೆಹಲಿಯ ಚಾಂದ್ ಬಾಗ್ ಪ್ರದೇಶದಲ್ಲಿ ಶರ್ಮ ಅವರ ಮೃತದೇಹ ಪತ್ತೆಯಾಗಿತ್ತು. ಕೇಂದ್ರ ಗುಪ್ತಚರ ವಿಭಾಗದ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಂಕಿತ್ ಶರ್ಮರನ್ನೂ ಚಾಂದ್ ಬಾಗ್ ಪ್ರದೇಶದ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.


ಅಂಕಿತ್ ಶರ್ಮಾ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ

ಇದನ್ನೂ ಓದಿ: ದೆಹಲಿ ಹಿಂಸಾಚಾರ: ನಿಯಂತ್ರಣಕ್ಕೆ ಅಮಿತ್‌ ಶಾ, ಕೇಜ್ರಿವಾಲ್‌ ಹರಸಾಹಸ

ಈ ಸಮಯದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಅಪರಿಚಿತರು ಅಂಕಿತ್ ಶರ್ಮಾ ಅವರ ಮೇಲೂ ಹಲ್ಲೆ ನಡೆಸಿದ್ದರು. ಆ ಸಮಯದಲ್ಲಿ ಯಾರೂ ಆಸ್ಪತ್ರೆಗೆ ದಾಖಲಿಸಿರಲಿಲ್ಲ. ತೀವ್ರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು