ಸೋಮವಾರ, ಜುಲೈ 13, 2020
29 °C

ಮಹಾರಾಷ್ಟ್ರ‌ ಸಚಿವರೊಬ್ಬರಿಗೆ ಕೊರೊನಾ ವೈರಸ್‌ ಸೋಂಕು 

ಏಜನ್ಸೀಸ್‌ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರ ಸಚಿವ, ಕಾಂಗ್ರೆಸ್‌ನ ಹಿರಿಯ ಮುಖಂಡರೊಬ್ಬರಿಗೆ ಕೊರೊನಾ ವೈರಸ್‌ ಸೋಂಕು ತಗುಲಿದೆ ಎಂದು  ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಸಚಿವರು ಮುಂಬೈ ಮತ್ತು ತಮ್ಮ ಮರಾಠವಾದ ನಡುವೆ ಆಗಾಗ್ಗೆ ಪ್ರಯಾಣಿಸುತ್ತಿದ್ದರು,’ ಎಂದು ಅವರು ಹೇಳಿದರು.

‘ಅವರು ಕೆಲವು ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದಾರೆ. ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,’ ಎಂದು ಅಧಿಕಾರಿ ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. 

ಈ ಹಿಂದೆ ಎನ್‌ಸಿಪಿ ಮುಖಂಡ, ವಸತಿ ಸಚಿವ ಜಿತೇಂದ್ರ ಅವದ್ ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿತ್ತು. ಎರಡು ವಾರಗಳಿಗಿಂತ ಹೆಚ್ಚು ಕಾಲ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರು ನಂತರ ಚೇತರಿಸಿಕೊಂಡಿದ್ದರು. 

ಇದರೊಂದಿಗೆ ಮಹಾರಾಷ್ಟ್ರದಲ್ಲಿ ಇಬ್ಬರು ಸಚಿವರಿಗೆ ಸೋಂಕು ತಗುಲಿದಂತಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು