ಮಂಗಳವಾರ, ಜನವರಿ 21, 2020
28 °C
ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಮುಂದುವರಿದ ಪ್ರತಿಭಟನೆ

ಪೌರತ್ವ ಕಾಯ್ದೆ: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಉತ್ತರ ಪ‍್ರದೇಶ ಮತ್ತು ಇತರ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಭಾನುವಾರವೂ ಮುಂದುವರಿದಿದೆ. ಹಿಂಸಾಚಾರದಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ಉತ್ತರ ಪ್ರದೇಶದಲ್ಲಿ ಶುಕ್ರವಾರದ ಬಳಿಕ ಏಕಾಏಕಿ ಹಿಂಸಾಚಾರ ಭುಗಿಲೆದ್ದಿತ್ತು. ಎಂಟು ವರ್ಷದ ಬಾಲಕ ಸೇರಿ 15 ಮಂದಿ ಮೃತಪಟ್ಟಿದ್ದರು. ರಾಮ್‌ಪುರದಲ್ಲಿ ಶನಿವಾರ ನಡೆದ ಗಲಭೆಯಲ್ಲಿ ಒಬ್ಬ ಪ್ರತಿಭಟನಾಕಾರ ಮೃತಪಟ್ಟಿದ್ದ. ಕಲ್ಲು ತೂರಾಟಗಾರರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದರು.

ಇದನ್ನೂ ಓದಿ: ಮಂಗಳೂರು ಗಲಭೆ: ಮೃತಪಟ್ಟವರ ಕುಟುಂಬಗಳಿಗೆ ತಲಾ ₹ 10 ಲಕ್ಷ ಪರಿಹಾರ ಘೋಷಣೆ

ದೇಶದ ಹಲವೆಡೆ ಸೂಕ್ಷ್ಮ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಗಿದೆ. ಪೊಲೀಸ್ ಮೂಲಗಳ ಮಾಹಿತಿ ಪ್ರಕಾರ, ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ದೇಶದಾದ್ಯಂತ ಸುಮಾರು 7,000 ಜನರನ್ನು ವಶಕ್ಕೆ ಪಡೆಯಲಾಗಿದೆ. 705 ಮಂದಿಯನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಚೆನ್ನೈ, ದೆಹಲಿ, ಗುರುಗ್ರಾಮ, ಕೋಲ್ಕತ್ತ ಮತ್ತು ಗುವಾಹಟಿಗಳಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಹಾರದ ರಾಜಧಾನಿ ಪಟ್ನಾದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಿದ್ದಾರೆ. ಈ ವೇಳೆ, ಮೂವರು ಗುಂಡಿನ ದಾಳಿಯಿಂದ ಗಾಯಗೊಂಡಿದ್ದು, ಆರು ಮಂದಿ ಕಲ್ಲು ತೂರಾಟದಿಂದ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು ಗೋಲಿಬಾರ್: ಹೈಕೋರ್ಟ್ ನ್ಯಾಯಮೂರ್ತಿಯಿಂದ ತನಿಖೆಗೆ ಕಾಂಗ್ರೆಸ್ ಆಗ್ರಹ

ಈ ಮಧ್ಯೆ, ಕಾಯ್ದೆಯ ಬಗ್ಗೆ ಹರಡಿರುವ ಸುಳ್ಳುಸುದ್ದಿಗಳನ್ನು ದೂರಮಾಡಲು ಮತ್ತು, ಜನರಲ್ಲಿ ಅರಿವು ಮೂಡಿಸಲು ಜಾಗೃತಿ ಅಭಿಯಾನ ಹಮ್ಮಿಕೊಳ್ಳುವುದಾಗಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು