ಶನಿವಾರ, ಮೇ 15, 2021
25 °C

ಉತ್ತರ ಪ್ರದೇಶ|ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ; ಜೀವ ಕಳೆದುಕೊಂಡವರು 22 ಮಂದಿ

ಪಿಟಿಐ  Updated:

ಅಕ್ಷರ ಗಾತ್ರ : | |

Anti-CAA protests in Lucknow

ಅಲಹಾಬಾದ್ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ 2019 ಡಿಸೆಂಬರ್ 20 ಮತ್ತು 21ರಂದು ನಡೆದ  ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ 22 ಮಂದಿ ಜೀವ ಕಳೆದುಕೊಂಡಿದ್ದಾರೆ. 83 ಮಂದಿಗೆ  ಗಾಯಗಳಾಗಿವೆ  ಎಂದು ಉತ್ತರ ಪ್ರದೇಶ ಸರ್ಕಾರ ಅಲಹಾಬಾದ್  ಹೈಕೋರ್ಟ್‌ನಲ್ಲಿ ಹೇಳಿದೆ. 

ಸೋಮವಾರ ಮುಖ್ಯನ್ಯಾಯಮೂರ್ತಿ ಗೋವಿಂದ್ ಮಾಥುರ್ ಮತ್ತು ನ್ಯಾಯಮೂರ್ತಿ ಸಿದ್ದಾರ್ಥ ಅವರ ನ್ಯಾಯಪೀಠದ ಮುಂದೆ  ಉತ್ತರ ಪ್ರದೇಶ ಸರ್ಕಾರದ ಪರವಾಗಿ  ನ್ಯಾಯಾಲಯಕ್ಕೆ ಹಾಜರಾದ ನ್ಯಾಯವಾದಿ ಮನೀಷ್ ಗೋಯೆಲ್, ಸಾರ್ವಜನಿಕ ಆಸ್ತಿಗಳನ್ನು ನಾಶ ಮಾಡಿದ್ದಕ್ಕೆ ಮತ್ತು ಗಲಭೆ ಸೃಷ್ಟಿಸಿದ 883 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.  ಇವರ ಪೈಕಿ 561 ಮಂದಿ ಜಾಮೀನು ಪಡೆದು ಹೊರಬಂದಿದ್ದಾರೆ . 322  ಮಂದಿ ಇನ್ನೂ ಜೈಲಿನಲ್ಲಿದ್ದಾರೆ. 111 ಮಂದಿ ಸಲ್ಲಿಸಿದ ಜಾಮೀನು ಅರ್ಜಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದೆ ಎಂದಿದ್ದಾರೆ.

ಇದನ್ನೂ ಓದಿ: ಪ್ರತಿಭಟನಾಕಾರರಿಗೆ ಆಘಾತ ನೀಡಿದ್ದೇವೆ: ಸರ್ಕಾರದ ಕ್ರಮ ಸಮರ್ಥಿಸಿದ ಆದಿತ್ಯನಾಥ್

ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ 45 ಪೊಲೀಸ್ ಮತ್ತು ಸರ್ಕಾರಿ ಅಧಿಕಾರಿಗಳು ಸೇರಿದಂತೆ ಹಲವರಿಗೆ  ಗಾಯಗಳಾಗಿವೆ. ಅವರೆಲ್ಲರಿಗೂ  ಚಿಕಿತ್ಸೆ ನೀಡಲಾಗಿದೆ. ಪೊಲೀಸರ ವಿರುದ್ಧ 10 ದೂರುಗಳು ದಾಖಲಾಗಿದ್ದು ಈ ಬಗ್ಗೆ  ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಮಾರ್ಚ್ 18ಕ್ಕೆ ನಡೆಯಲಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಪ್ರತಿಭಟನಾಕಾರರು ಪಾಕ್‌ಗೆ ಹೋಗಲಿ ಎಂದರೇ ಮೀರತ್ ಎಸ್‌ಪಿ?

ಈ ಬಗ್ಗೆ ಅರ್ಜಿದಾರರು ಮತ್ತು ರಾಜ್ಯ ಸರ್ಕಾರ ತಮ್ಮ ಅಫಿಡವಿಟ್ ಮತ್ತು ದಾಖಲೆಗಳನ್ನು ಸಲ್ಲಿಸುವಂತೆ ನ್ಯಾಯಪೀಠ ಆದೇಶಿಸಿದೆ. 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು