ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಟಿಐಐ ಮುಖ್ಯಸ್ಥನ ಸ್ಥಾನಕ್ಕೆ ಅನುಪಮ್ ಖೇರ್ ರಾಜೀನಾಮೆ

Last Updated 31 ಅಕ್ಟೋಬರ್ 2018, 18:10 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅವರು ಪುಣೆಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯ (ಎಫ್‌ಟಿಐಐ) ಮುಖ್ಯಸ್ಥನ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.

ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಒಂದು ಶೋ ನಿಮಿತ್ತ ಅಮೆರಿಕಕ್ಕೆ ಹೋಗಬೇಕಾದ ಕಾರಣ ಈ ರಾಜೀನಾಮೆ ನೀಡುತ್ತಿದ್ದೇನೆ. 2018 ರಿಂದ 2019ರವರೆಗೆ ಅಂದರೆ ಸುಮಾರು 9 ತಿಂಗಳ ಕಾಲ ಇಲ್ಲಿಯೇ ಉಳಿಯಬೇಕಾಗಿದೆ. ಸ್ಮೃತಿ ಇರಾನಿ ಅವರು ನನ್ನನ್ನು ಮುಖ್ಯಸ್ಥನ ಸ್ಥಾನಕ್ಕೆ ನೇಮಿಸುವಾಗಲೇ ಈ ವಿಚಾರವನ್ನು ಅವರಿಗೆ ತಿಳಿಸಿದ್ದೆ ಎಂದು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT