ಭಾನುವಾರ, ಮಾರ್ಚ್ 29, 2020
19 °C

ಹೈದರಾಬಾದ್‌: ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಬಣ್ಣ ಅಳಿಸಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಪಂಚಾಯಿತಿ ಕಟ್ಟಡಗಳಿಗೆ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಬಣ್ಣ ಬಳಿದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಆಂಧ್ರಪ್ರದೇಶ ಹೈಕೋರ್ಟ್‌, ತಕ್ಷಣವೇ ಅಳಿಸಿ ಹಾಕುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಕಳೆದ ವರ್ಷ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ  ನೀಲಿ, ಬಿಳಿ ಮತ್ತು ಹಸಿರು ಬಣ್ಣ ಬಳಿಯಲಾಗಿತ್ತು. ಕೆಲ ಸರ್ಕಾರಿ ಕಟ್ಟಡಗಳಿಗೂ ಇದೇ ಬಣ್ಣ ಬಳಸಲಾಗಿತ್ತು. ಅನಂತಪುರ ಜಿಲ್ಲೆಯ ಗ್ರಾಮ ಪಂಚಾಯಿತಿ ಕಟ್ಟಡವೊಂದರಲ್ಲಿ ತ್ರಿವರ್ಣ ಧ್ವಜದ ಬಣ್ಣಗಳನ್ನು ಅಳಿಸಿ ಪಕ್ಷದ ಬಣ್ಣಗಳನ್ನು ಉಪಯೋಗಿಸಲಾಗಿತ್ತು. ಇದು ತೀವ್ರ ಟೀಕೆಗೆ ಒಳಗಾಗಿತ್ತು.

ಈ ಬಗ್ಗೆ ಮಂಗಳವಾರ ಆದೇಶ ನೀಡಿರುವ ಹೈಕೋರ್ಟ್‌, ಸಾರ್ವಜನಿಕರ ಹಣವನ್ನು ಈ ರೀತಿ ಉಪಯೋಗಿಸಿಕೊಂಡಿರುವುದು ಸರಿ ಅಲ್ಲ ಎಂದು ಹೇಳಿದೆ. ಜತೆಗೆ, 10 ದಿನಗಳಲ್ಲಿ ಬಣ್ಣಗಳನ್ನು ಅಳಿಸುವಂತೆ ಸೂಚಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು