ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಚೀನಾ ಉತ್ಪನ್ನ ಬಹಿಷ್ಕಾರಕ್ಕೆ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಕರೆ

Last Updated 20 ಜೂನ್ 2020, 5:24 IST
ಅಕ್ಷರ ಗಾತ್ರ

ಭೂಪಾಲ್‌: ಲಡಾಖ್ ಗಡಿ ಘರ್ಷಣೆ ನಂತರ ಭಾರತದಲ್ಲಿ ಚೀನಾ ಸರಕುಗಳನ್ನು ಬಹಿಷ್ಕರಿಸುವ ಕೂಗು ಮತ್ತಷ್ಟು ಹೆಚ್ಚಾಗಿದೆ. ಇದೇ ವೇಳೆ ಮಧ್ಯಪ್ರದೇಶದಲ್ಲಿ ಚೀನಾ ತಯಾರಿಸಿದ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಸೈನ್ಯವು ಎದುರಾಳಿ ಪಡೆಗೆ ತಕ್ಕ ಉತ್ತರವನ್ನು ನೀಡುತ್ತದೆ. ಆದರೆ, ನಾವು ಚೀನಾಗೆ ಆರ್ಥಿಕವಾಗಿ ಹೊಡೆತ ಕೊಡಲಿದ್ದೇವೆ’ ಎಂದು ಹೇಳಿದ್ದಾರೆ. ‌

ದೇಶದಲ್ಲಿ ದಿನದಿಂದ ದಿನಕ್ಕೆ ಚೀನಾ ಉತ್ಪನ್ನಗಳನ್ನು ನಿಷೇಧಿಸುವಂತೆ ಬೇಡಿಕೆ ಹೆಚ್ಚಾಗಿ ಕೇಳಿ ಬರುತ್ತಿದೆ.

ವಾರ್ಷಿಕವಾಗಿ ಚೀನಾದಿಂದ 7400 ಕೋಟಿ ಅಮೆರಿಕನ್ ಡಾಲರ್ (₹5.63 ಲಕ್ಷ ಕೋಟಿ) ಮೌಲ್ಯದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿರುವ ಇ-ಕಾಮರ್ಸ್ ಸಂಸ್ಥೆಗಳು ತಮ್ಮ ಮಾರಾಟವನ್ನು ನಿರ್ಬಂಧಿಸಲು ನಿರ್ದೇಶನ ನೀಡುವಂತೆ ಶುಕ್ರವಾರ ವ್ಯಾಪಾರಿಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.

ಚೀನಾದಿಂದ ಒಟ್ಟು ಆಮದು ವಸ್ತುಗಳ ಪೈಕಿ ಚಿಲ್ಲರೆ ವ್ಯಾಪಾರಿಗಳು ಸುಮಾರು 1700 ಕೋಟಿ ಡಾಲರ್ ಮೌಲ್ಯದ (₹1.29 ಲಕ್ಷ ಕೋಟಿ) ಸರಕುಗಳನ್ನು ಮಾರಾಟ ಮಾಡುತ್ತಾರೆ. ಇದರಲ್ಲಿ ಹೆಚ್ಚಾಗಿ ಆಟಿಕೆಗಳು, ಗೃಹೋಪಯೋಗಿ ವಸ್ತುಗಳು, ಮೊಬೈಲ್, ಎಲೆಕ್ಟ್ರಿಕ್ ಮತ್ತು ಎಲೆಕ್ಟ್ರಾನಿಕ್ ಸರಕುಗಳು ಮತ್ತು ಸೌಂದರ್ಯವರ್ಧಕಗಳು ಸೇರಿವೆ. ಇವುಗಳಿಗೆ ಪರ್ಯಾಯವಾಗಿ ಭಾರತೀಯ ಉತ್ಪನ್ನಗಳನ್ನು ಬಳಸಬಹುದು ಎಂದು ರಾಷ್ಟ್ರೀಯ ವ್ಯಾಪಾರ ಸಂಸ್ಥೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT