ಸೋಮವಾರ, ಜುಲೈ 4, 2022
24 °C

ಕೇಜ್ರಿವಾಲ್‌ ವಿರುದ್ಧ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಜಿಪುರ, ಬಿಹಾರ(ಪಿಟಿಐ): ಉಚಿತ ವೈದ್ಯಕೀಯ ಚಿಕಿತ್ಸೆ ಪಡೆಯಲು ಬಿಹಾರಿಗಳು ರಾಷ್ಟ್ರ ರಾಜಧಾನಿಗೆ ಬರುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಕ್ಕಾಗಿ ದೆಹಲಿ ಸಿ.ಎಂ ಅರವಿಂದ ಕೇಜ್ರಿವಾಲ್‌ ವಿರುದ್ಧ ಇಲ್ಲಿನ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ನಿತೀಶ್‌ ಕುಮಾರ್‌ ಎನ್ನುವವರು ಈ ದೂರು ದಾಖಲಿಸಿದ್ದಾರೆ. ಕೇಜ್ರಿವಾಲ್‌ ಅವರ ಹೇಳಿಕೆಯಿಂದ ತಮಗೆ ನೋವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ಬಿಹಾರದ ಜನತೆ ₹500 ಟಿಕೆಟ್‌ ಖರೀದಿಸಿ ದೆಹಲಿಗೆ ಬರುತ್ತಾರೆ. ಬಳಿಕ, ಇಲ್ಲಿ ₹5 ಲಕ್ಷ ಮೌಲ್ಯದ ವೈದ್ಯಕೀಯ ಚಿಕಿತ್ಸೆ ಪಡೆದು ಹಿಂತಿರುಗುತ್ತಾರೆ ಎಂದು ಕೇಜ್ರಿವಾಲ್‌ ನೀಡಿದ್ದ ಹೇಳಿಕೆಯನ್ನು ಹಿಂದಿ ದಿನಪತ್ರಿಕೆ ವರದಿ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು