ಮಂಗಳವಾರ, ಫೆಬ್ರವರಿ 25, 2020
19 °C

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ದೀದಿಯನ್ನು ಆಹ್ವಾನಿಸಿದ ಕೇಜ್ರಿವಾಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೆಹಲಿ: ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿರುವುದು ಸರಿಯಾದರೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮತ್ತೊಮ್ಮೆ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೇರಲಿದ್ದಾರೆ. ಗೆಲುವು ನಿಶ್ಚಿತ ಎಂಬ ಭರವಸೆಯಲ್ಲಿರುವ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಆಹ್ವಾನಿಸಿದ್ದಾರೆ.

ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಆಮ್ ಆದ್ಮಿ ಪಕ್ಷ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿವೆ. ಮುಂದಿನ 5 ವರ್ಷ ದೇಶದ ರಾಜಧಾನಿಯಲ್ಲಿ ನಮ್ಮ ಪಕ್ಷ ಅಧಿಕಾರ ನಡೆಸುತ್ತದೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಕೇಜ್ರಿವಾಲ್ ಮಮತಾ ಬ್ಯಾನರ್ಜಿ ಅವರಿಗೆ ಕರೆ ಮಾಡಿ ಹೇಳಿದ್ದಾರೆ.

ಆ ದಿನ ಬೇರೆ ಯಾವುದೇ ಕಾರ್ಯಕ್ರಮ ಇಲ್ಲದಿದ್ದರೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬರುವುದಾಗಿ ಮಮತಾ ಹೇಳಿದ್ದಾರೆ ಎಂದು ಬಲ್ಲಮೂಲಗಳು ತಿಳಿಸಿವೆ. ದೆಹಲಿ ಮುಖ್ಯಮಂತ್ರಿಯಾಗಿ  ಅರವಿಂದ  ಕೇಜ್ರಿವಾಲ್ ಅಧಿಕಾರಕ್ಕೇರುತ್ತಿರುವುದು ಇದು ಮೂರನೇ ಬಾರಿಯಾಗಿದೆ. 

2013 ಡಿಸೆಂಬರ್ 28ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಕೇಜ್ರಿವಾಲ್ 2014 ಫೆಬ್ರುವರಿ 14 ರಂದು ರಾಜೀನಾಮೆ ನೀಡಿದ್ದರು. ಇದಾದ ನಂತರ 2015 ಫೆಬ್ರುವರಿ 14ರಂದು ಗೆಲುವು ಸಾಧಿಸಿ ಮತ್ತೆ ಮುಖ್ಯಮಂತ್ರಿಯಾದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು