ಗುರುವಾರ , ಸೆಪ್ಟೆಂಬರ್ 23, 2021
28 °C
17 ರಾಜ್ಯಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ

ಅರವಿಂದ ಲಿಂಬಾವಳಿಗೆ ತೆಲಂಗಾಣದ ಹೊಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಲೋಕಸಭಾ ಚುನಾವಣೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಬುಧವಾರ 17 ರಾಜ್ಯಗಳಿಗೆ ಹೊಸದಾಗಿ ಉಸ್ತುವಾರಿಗಳನ್ನು ನೇಮಿಸಿದ್ದಾರೆ.

ಕರ್ನಾಟಕದ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರಿಗೆ ತೆಲಂಗಾಣದ ಉಸ್ತುವಾರಿ ವಹಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಕಟು ಟೀಕಾಕಾರರಾಗಿದ್ದ ಗುಜರಾತ್‌ನ ಪ್ರಭಾವಿ ನಾಯಕ ಗೋರ್ಧನ್‌ ಝಡಫಿಯಾ ಅವರಿಗೆ ರಾಷ್ಟ್ರೀಯ ರಾಜಕಾರಣದಲ್ಲಿ ಸ್ಥಾನ ನೀಡಲಾಗಿದ್ದು, ಉತ್ತರ ಪ್ರದೇಶದ ಉಸ್ತುವಾರಿ ನೀಡಿರುವುದು ಅಚ್ಚರಿ ಮೂಡಿಸಿದೆ. ಕೇಂದ್ರ ಸಚಿವರಾದ ಪ್ರಕಾಶ್‌ ಜಾವಡೇಕರ್‌ ಅವರನ್ನು ರಾಜಸ್ಥಾನಕ್ಕೆ ಮತ್ತು ಉತ್ತರಾಖಂಡಗೆ ತಾವರಚಂದ್‌ ಗೆಹ್ಲೊಟ್‌ ಅವರನ್ನು ನೇಮಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು