ಸೇನಾಪಡೆಯಉಪ ಮುಖ್ಯಸ್ಥರಾಗಿನರವಣೆ ನೇಮಕ
ನವದೆಹಲಿ: ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ಲೆಫ್ಟಿನಂಟ್ ಜನರಲ್ ಮನೋಜ್ ಮುಕುಂದ್ ನರವಣೆ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಲೆಫ್ಟಿನಂಟ್ ಜನರಲ್ ಡಿ.ಅನ್ಬು ಅವರು ಆಗಸ್ಟ್ 31ರಂದು ನಿವೃತ್ತರಾಗಲಿದ್ದು, ತೆರವಾಗುವ ಸ್ಥಾನಕ್ಕಾಗಿ ಈ ನೇಮಕ ನಡೆದಿದೆ.
ಸೇನಾಪಡೆ ಮುಖ್ಯಸ್ಥ ಬಿಪಿನ್ ರಾವತ್ ಇದೇ ವರ್ಷದ ಡಿಸೆಂಬರ್ 31ರಂದು ನಿವೃತ್ತರಾಗಲಿದ್ದಾರೆ. ಇವರ ನಂತರ ನರವಣೆ ಅವರೇ ಅತ್ಯಂತ ಹಿರಿಯ ಅಧಿಕಾರಿಯಾಗಿದ್ದು, ಸೇನಾಪಡೆಯ ಮುಂದಿನ ಮುಖ್ಯಸ್ಥ ಸ್ಥಾನಕ್ಕೆ ಪ್ರಬಲ ಸ್ಪರ್ಧಿಯಾಗಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.