ಶುಕ್ರವಾರ, ಏಪ್ರಿಲ್ 23, 2021
30 °C

ಲಡಾಖ್: ಗಡಿಗೆ ಭೇಟಿ ನೀಡಿ ಯೋಧರನ್ನು ಶ್ಲಾಘಿಸಿದ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Manoj Mukund Naravane

ಲಡಾಖ್: ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಅವರು ಬುಧವಾರ ಪೂರ್ವ ಲಡಾಖ್‌ನ ಮುಂಚೂಣಿ ನೆಲೆಗಳಿಗೆ ಭೇಟಿ ನೀಡಿ ಯೋಧರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರು, ಯೋಧರ ಸಾಹಸವನ್ನು ಶ್ಲಾಘಿಸಿದ್ದಾರೆ.

ಯೋಧರ ಮನೋಸ್ಥೈರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸೇನಾ ಮುಖ್ಯಸ್ಥರು, ಮುಂದೆಯೂ ಉತ್ಸಾಹ ಮತ್ತು ಹುಮ್ಮಸ್ಸಿನೊಂದಿಗೆ ಕಾರ್ಯನಿರ್ವಹಿಸುವಂತೆ ಸೂಚಿಸಿದರು ಎಂದು ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಚೀನಾ ಜತೆಗಿನ ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕಿಸಲು ನರವಣೆ ಅವರು ಲಡಾಖ್‌ಗೆ ಮೂರು ದಿನಗಳ ಭೇಟಿ ಕೈಗೊಂಡಿದ್ದಾರೆ. ಮಂಗಳವಾರ ಲೇಹ್‌ಗೆ ಭೇಟಿ ನೀಡಿದ್ದ ಅವರು, ಚೀನಾ ಸೇನೆ ಜತೆಗಿನ ಮಾತುಕತೆಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು ಮತ್ತು ತಳಮಟ್ಟದಲ್ಲಿ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವಲೋಕಿಸಿದ್ದರು. ಲಡಾಖ್‌ ಸಂಸದ ಜಮ್‌ಯಾಂಗ್ ಟ್ಸೆರಿಂಗ್ ನಮ್‌ಯಾಂಗ್ ಜತೆಗೂ ಮಾತುಕತೆ ನಡೆಸಿದ್ದರು. ಜೂನ್ 15ರಂದು ಚೀನಾ ಪಡೆಗಳ ಜತೆಗಿನ ಸಂಘರ್ಷದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಯೋಧರಿರುವ ಆಸ್ಪತ್ರೆಗೂ ಭೇಟಿ ನೀಡಿದ್ದ ಅವರು ಯೋಧರ ಜತೆ ಮಾತುಕತೆ ನಡೆಸಿದ್ದರು.

ಈ ಮಧ್ಯೆ, ಗಡಿ ಪ್ರದೇಶದಲ್ಲಿನ ಉದ್ವಿಗ್ನತೆ ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತ–ಚೀನಾ ನಡುವಣ ಸೇನಾ ಮಟ್ಟದ ಮಾತುಕತೆ ಮುಂದುವರಿದಿದೆ.

ಇನ್ನಷ್ಟು..

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು