ಶುಕ್ರವಾರ, ಏಪ್ರಿಲ್ 23, 2021
27 °C

ಲಡಾಖ್‌ಗೆ ಭೇಟಿ ನೀಡಿದ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರು ಮಂಗಳವಾರ ಲಡಾಖ್‌‌ಗೆ ಭೇಟಿ ನೀಡಿದ್ದಾರೆ.

ಗಡಿಯಲ್ಲಿ ಕಳೆದ ಆರು ವಾರಗಳಿಂದ ನಡೆಯುತ್ತಿರುವ ಚೀನಾದ ಸೇನೆ ಜಮಾವಣೆ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.

ನರವಾಣೆ ಅವರು ಮೂರು ಸ್ಥಳಗಳಲ್ಲಿ ಸೈನಿಕರ ಜೊತೆ ಸಂವಾದ ನಡೆಸಲಿದ್ದಾರೆ.

ಜೂನ್‌ 15ರ ತಡರಾತ್ರಿ ಗಾಲ್ವನ್‌‌ ಕಣಿವೆಯ ವಾಸ್ತವ ಗಡಿರೇಖೆ ಬಳಿ ಭಾರತ– ಚೀನಾ ಸೈನಿಕರ ನಡುವೆ ಸಂಘರ್ಷ ನಡೆದಿತ್ತು. ಇದರಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾದರು. ಇದಾದ ಬಳಿಕ ಭಾರತ–ಚೀನಾ ಗಡಿ ಪ್ರದೇಶದಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ.

**

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು