ಸೋಮವಾರ, ಏಪ್ರಿಲ್ 6, 2020
19 °C

ಬೆಂಕಿಯಿಂದ ನಾಯಿ ರಕ್ಷಣೆಗೆ ಯತ್ನ: ಸೇನಾ ಅಧಿಕಾರಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು–ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗುಲ್‌ಮಾರ್ಗ್‌ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ನಾಯಿಯನ್ನು ರಕ್ಷಿಸಲು ಪ್ರಯತ್ನಿಸಿದ ಸೇನಾ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. 

ಸೇನಾ ಶಿಬಿರದಲ್ಲಿ ಮೇಜರ್‌ ಅಂಕಿತ್‌ ಬುಧ್‌ರಾಜ್‌ ಅವರು ತಂಗಿದ್ದ ಟೆಂಟ್‌ಗೆ ಶನಿವಾರ ರಾತ್ರಿ ಬೆಂಕಿ ಹೊತ್ತಿಕೊಂಡಿತ್ತು. ಪತ್ನಿ ಹಾಗೂ ಒಂದು ನಾಯಿಯನ್ನು ಅವರು ರಕ್ಷಿಸಿದರು. ಮತ್ತೊಂದು ನಾಯಿಯನ್ನು ರಕ್ಷಿಸಲು ಹೋದ ಅಧಿಕಾರಿ, ಶೇ 90ರಷ್ಟು ಗಾಯಗೊಂಡಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸ್ಥಳೀಯ ಪೊಲೀಸರ ನೆರವಿನೊಂದಿಗೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)