ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾವೃತ ಸೆಲಾ ಪಾಸ್: 111 ಜನರ ರಕ್ಷಿಸಿದ ಸೇನೆ

Last Updated 2 ಮಾರ್ಚ್ 2020, 19:05 IST
ಅಕ್ಷರ ಗಾತ್ರ

ಗುವಾಹಟಿ: ಅರುಣಾಚಲ ಪ್ರದೇಶದಲ್ಲಿ 14 ಸಾವಿರ ಅಡಿ ಎತ್ತರದಲ್ಲಿ ಹಿಮಾವೃತ ಸೆಲಾ ಪಾಸ್‌ನಲ್ಲಿ ಸಿಲುಕಿದ್ದ 111 ಜನರು ಹಾಗೂ 70 ವಾಹನಗಳನ್ನು ಸೇನೆಯ ಸಿಬ್ಬಂದಿ ರಕ್ಷಿಸಿದ್ದಾರೆ.

ಸೇನೆ ಸೋಮವಾರ ಈ ವಿಷಯ ತಿಳಿಸಿದ್ದು, ‘ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನ ಜಾವದವರೆಗೂ ಸೇನೆಯ ಎರಡು ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಹಿಮದಲ್ಲಿ ಸಿಲುಕಿದ್ದವರಲ್ಲಿ ಮಕ್ಕಳು ಹಾಗೂ ಮಹಿಳೆಯರೂ ಇದ್ದರು’ ಎಂದು ಪ್ರಕಟಣೆಯಲ್ಲಿ ಹೇಳಿದೆ.

ಪರಿಸ್ಥಿತಿ ಕುರಿತು ನಿಗಾ ಇರಿಸಿದ್ದ ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯ ಕಚೇರಿ, ‘ಸೂಕ್ತ ಸಮಯದಲ್ಲಿ ಸೇನೆ ಕಾರ್ಯಾಚರಣೆ ನಡೆಸಿದೆ’ ಎಂದು ಪ್ರಶಂಸಿಸಿದೆ.

ಭಾರತ–ಚೀನಾ ಗಡಿಗೆ ಸಮೀಪದಲ್ಲಿರುವ ಸೆಲಾ ಪಾಸ್‌ನಲ್ಲಿ ಚಳಿಗಾಲದ ವೇಳೆ ಹಿಮ ಸುರಿಯುವುದರಿಂದಾಗಿ, ಇದು ಪ್ರವಾಸಿಗರ ನೆಚ್ಚಿನ ತಾಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT