ಕೌಶಲ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಆರಂಭಿಸಿದ ಸೇನೆ

7

ಕೌಶಲ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಆರಂಭಿಸಿದ ಸೇನೆ

Published:
Updated:

ಜಮ್ಮು: ಇಲ್ಲಿನ ಕಿಸ್ತ್ವಾರ್ ಜಿಲ್ಲೆಯ ಯುವಕರಿಗಾಗಿ ಭಾರತೀಯ ಸೇನೆಯು ಕೌಶಲ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಆರಂಭಿಸಿದೆ.

‘ಯುವಕರನ್ನು ಸ್ವ ಉದ್ಯೋಗಕ್ಕೆ ಪ್ರೇರೇಪಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆರಂಭಿಸಲಾಗಿದೆ’ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಕೌಶಲ ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದ ಮೊದಲ ಹಂತದಲ್ಲಿ ಪ್ಲಂಬಿಂಗ್‌ ತರಬೇತಿ ಆರಂಭಿಸಲಾಗಿದೆ ಎಂದಿದ್ದಾರೆ.

‘30 ಯುವಕರಿಗೆ ಮೂರು ತಿಂಗಳು ತರಬೇತಿ ನೀಡಲಾಗುವುದು. ತರಬೇತಿ ಪೂರೈಸಿದವರಿಗೆ ಪ್ರಮಾಣ ಪತ್ರ ಕೂಡ ವಿತರಿಸಲಾಗುವುದು’ ಎಂದೂ ಹೇಳಿದ್ದಾರೆ.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !