ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರುಣ್‌ ಜೇಟ್ಲಿ ನಿಧನ: ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ ಗಣ್ಯರು

Last Updated 24 ಆಗಸ್ಟ್ 2019, 11:19 IST
ಅಕ್ಷರ ಗಾತ್ರ

ನವದೆಹಲಿ:ಬಿಜೆಪಿ ನಾಯಕ, ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್‌ ಜೇಟ್ಲಿ(66) ಅವರ ನಿಧನಕ್ಕೆ ಗಣ್ಯರು ಟ್ವಿಟರ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜೇಟ್ಲಿ ಅವರು, ಶನಿವಾರಮಧ್ಯಾಹ್ನ 12.07ಕ್ಕೆ ನಿಧನರಾದರು.

**

ಅನಾರೋಗ್ಯದ ವಿರುದ್ಧಧೈರ್ಯವಾಗಿ ಹಾಗೂ ಘನತೆಯಿಂದ ಹೋರಾಡಿದ ಅರುಣ್‌ ಜೇಟ್ಲಿ ಅವರ ನಿಧನದಿಂದ ತಂಬಾ ದುಃಖಿತನಾಗಿದ್ದೇನೆ. ನಿಪುಣ ವಕೀಲ, ಅತ್ಯುತ್ತ ಸಂಸದೀಯ ಪಟು ಹಾಗೂ ಜನಪ್ರಿಯ ಸಚಿವರಾಗಿ ಅವರು ದೇಶ ಕಟ್ಟುವ ಕಾರ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.ಅರುಣ್ ಜೇಟ್ಲಿ ನಿಧನ ನಮ್ಮ ಸಾರ್ವಜನಿಕಬದುಕು ಹಾಗೂ ಆರ್ಥಿಕ ವ್ಯವಸ್ಥೆಗೆ ತುಂಬಲಾರದ ನಷ್ಟ. ಕುಟುಂಬಕ್ಕೆ ಸಾವಿನ ದುಃಖವನ್ನು ಭರಿಸುವ ಶಕ್ತಿ ನೀಡಲಿ.
–ರಾಮನಾಥ ಕೋವಿಂದ್, ರಾಷ್ಟ್ರಪತಿ
**

ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಹಣಕಾಸು ಸಚಿವರಾಗಿ ಅರುಣ್ ಜೇಟ್ಲಿಯವರು ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಕಪ್ಪುಹಣ ನಿಯಂತ್ರಣ, ಜಿಎಸ್‌ಟಿಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ದೇಶದ ಜನರ ಕಲ್ಯಾಣಕ್ಕಾಗಿ ಹಮ್ಮಿಕೊಂಡ ಅನೇಕ ಯೋಜನೆಗಳ ಯಶಸ್ಸಿಗೆ ಶ್ರಮಿಸಿದ್ದಾರೆ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
–ಅಮಿತ್‌ ಶಾ, ಕೇಂದ್ರ ಗೃಹ ಸಚಿವ

**

ಅರುಣ್‌ ಜೇಟ್ಲಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಇದು ದೇಶಕ್ಕೆ ಆದ ತುಂಬಲಾರದ ನಷ್ಟ. ಕೇಂದ್ರದ ಹಣಕಾಸು ಸಚಿವರಾಗಿ, ಆರ್ಥಿಕ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆಯನ್ನು ತರಲು ಸಾಕಷ್ಟು ಶ್ರಮಿಸಿದ್ದಾರೆ.
–ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ

**

ಅರುಣ್‌ ಜೇಟ್ಲಿ ಅವರುಮೃತಪಟ್ಟಿರುವುದು ನೋವಿನ ಸಂಗತಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಹಾಗೂ ಹಿತೈಶಿಗಳಿಗೆ
ದುಃಖ ಭರಿಸುವ ಶಕ್ತಿ ದೊರೆಯಲಿ.
-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

**

ಅರುಣ್‌ ಜೇಟ್ಲಿ ಅವರ ನಿಧನದಿಂದ ತುಂಬಾ ದುಃಖಿತನಾಗಿದ್ದೇನೆ. ದೇಶವನ್ನು ಕಟ್ಟಲು ಅವರು ನೀಡಿದ ಕೊಡುಗೆ ಅಪಾರ. ಅವರ ಕುಟುಂಬ ಹಾಗೂ ಹಿತೈಶಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ.
–ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ
**

ಜೀವನದುದ್ದಕ್ಕೂ ದೇಶಕ್ಕಾಗಿ ಸ್ವಾರ್ಥರಹಿತವಾಗಿ ಸೇವೆ ಸಲ್ಲಿಸಿದ ಶ್ರೇಷ್ಠ ವ್ಯಕ್ತಿಯಾಗಿ, ಕಾನೂನು ತಜ್ಞರಾಗಿ,ಅತ್ಯತ್ತಮ ಸಂಸದೀಯ ಪಟುವಾಗಿ ನೆನಪಿನಲ್ಲಿ ಉಳಿಯಲಿದ್ದಾರೆ. ವಿದ್ಯಾರ್ಥಿ ನಾಯಕರಾಗಿ ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದ ನಿಜವಾದ ಪ್ರಜಾಪ್ರಭುತ್ವವಾದಿ ಅವರು.
–ಯೋಗಿ ಆದಿತ್ಯನಾಥ, ಉತ್ತರ ಪ್ರದೇಶ, ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT