ಆರುಷಿ ಕೊಲೆ ಪ್ರಕರಣ: ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ

7

ಆರುಷಿ ಕೊಲೆ ಪ್ರಕರಣ: ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ

Published:
Updated:

ನವದೆಹಲಿ : ತಮ್ಮ ಮಗಳು ಆರುಷಿ ಹಾಗೂ ಮನೆಕೆಲಸದಾಳು ಹೇಮರಾಜ್‌ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, ನಂತರ ಖುಲಾಸೆಗೊಂಡಿರುವ ದಂತವೈದ್ಯ ರಾಜೇಶ್‌ ತಲ್ವಾರ್, ನೂಪುರ್‌ ತಲ್ವಾರ್ ದಂಪತಿಗೆ ಹೊಸ ಸಂಕಷ್ಟ ಎದುರಾಗಿದೆ.

ಅಲಹಾಬಾದ್‌ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್‌ ಶುಕ್ರವಾರ ಸಮ್ಮತಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರ ನವೆಂಬರ್‌ನಲ್ಲಿ ಗಾಜಿಯಾಬಾದ್‌ ನ್ಯಾಯಾಲಯವು ತಲ್ವಾರ್‌ ದಂಪತಿಯನ್ನು ಅಪರಾಧಿಗಳು ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆದರೆ ಕಳೆದ ವರ್ಷ ಅಲಹಬಾದ್‌ ಹೈಕೋರ್ಟ್‌ ಈ ಪ್ರಕರಣದಲ್ಲಿ ದಂಪತಿಯನ್ನು ಖುಲಾಸೆಗೊಳಿಸಿತ್ತು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 1

  Frustrated
 • 1

  Angry

Comments:

0 comments

Write the first review for this !