ಭಾನುವಾರ, ಏಪ್ರಿಲ್ 5, 2020
19 °C

ದೆಹಲಿ|ಕಾರ್ಯಕ್ರಮಗಳಿಗೆ ನಿಷೇಧ, 50 ಜನರಿಗಿಂತ ಹೆಚ್ಚು ಜನ ಸೇರಬಾರದು: ಕೇಜ್ರಿವಾಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Arvind Kejriwal

ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು  ದೆಹಲಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು 50 ಜನರಿಗಿಂತ ಹೆಚ್ಚು ಜನರು ಗುಂಪು ಸೇರುವುದಕ್ಕೆ ನಿಷೇಧ ಹೇರಿದೆ

ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ಪ್ರಕಾರ  ಸಾಮಾಜಿಕ, ಧಾರ್ಮಿಕ, ರಾಜಕೀಯ ಸಂಬಂಧಿ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ. ಸದ್ಯ ಮದುವೆ ಕಾರ್ಯಕ್ರಮಕ್ಕೆ ಮಾತ್ರ ಈ ನಿಷೇಧ ಅನ್ವಯವಾಗುವುದಿಲ್ಲ. ಸಾಧ್ಯವಾದರೆ ಮದುವೆ ಕಾರ್ಯಕ್ರಮ ಮುಂದೂಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.  ಈ ನಿಷೇಧ ಆದೇಶ ತಕ್ಷಣವೇ ಜಾರಿಗೆ ಬರಲಿದೆ. 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಹೀನ್‌ಬಾಗ್‌ನಲ್ಲಿ ಕಳೆದ ಎರಡೂವರೆ ತಿಂಗಳಿನಿಂದ ಪ್ರತಿಭಟನೆ ನಡೆಯುತ್ತಿದ್ದು, ಈ ನಿಯಮ ಎಲ್ಲರಿಗೂ ಅನ್ವಯವಾಗಲಿದೆ. 50 ಜನರಿಗಿಂತ ಹೆಚ್ಚು ಜನರು ಗುಂಪು ಸೇರಬಾರದು ಎಂಬ ಆದೇಶ ಜಾರಿಗೆ ಬಂದ ನಂತರವೂ ಪ್ರತಿಭಟನೆಕಾರರು ಅಥವಾ ಇತರರು ಗುಂಪು ಸೇರಿದರೆ  ಸಾಂಕ್ರಾಮಿಕ ರೋಗಗಳ ಕಾಯ್ದೆ ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಮೆಜಿಸ್ಟ್ರೇಟ್  (ಉಪ ಆಯುಕ್ತ) ಹೇಳಿದ್ದಾರೆ.

ಈಗಾಗಲೇ ಶಾಲೆ, ಕಾಲೇಜು, ಈಜುಕೊಳ ಮೊದಲಾದವುಗಳನ್ನು ಮುಚ್ಚಲಾಗಿದೆ. ಇವತ್ತು ಜಿಮ್, ನೈಟ್ ಕ್ಲಬ್ ಮತ್ತು ಸ್ಪಾಗಳನ್ನು ಮುಚ್ಚಲು ಆದೇಶ ನೀಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್ ಹೇಳಿದ್ದಾರೆ.

ಇಲ್ಲಿಯವರೆಗೆ ದೆಹಲಿಯಲ್ಲಿ ಕೋವಿಡ್ -19 ಸೋಂಕಿನ 7 ಪ್ರಕರಣ ಪತ್ತೆಯಾಗಿದ್ದು ಇಬ್ಬರು ರೋಗಿಗಳು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ  ಮನೆಗೆ ಮರಳಿದ್ದಾರೆ. ಕಳೆದ ವಾರ 68ರ ಹರೆಯದ ಮಹಿಳೆಯೊಬ್ಬರು ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದರು .

ಅಧಿಕ ಸಂಖ್ಯೆಯಲ್ಲಿ ಜನ ಸೇರುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆಡಳಿತ ವ್ಯವಸ್ಥೆ ಸಿದ್ಧವಾಗಿದೆ ಎಂದಿದ್ದಾರೆ ಕೇಜ್ರಿವಾಲ್.

 ಹೆಚ್ಚು ಜನರನ್ನು ಆಸ್ಪತ್ರೆಗೆ ಸೇರಿಸಬೇಕಾದ ಸಂದರ್ಭ ಬಂದರೆ 500 ಹಾಸಿಗೆಗಳ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಸೋಂಕು ಶಂಕಿತರನ್ನು ಪ್ರತ್ಯೇಕವಾಗಿ ನಿಗಾ ಇಡಲು ದೆಹಲಿಯ ಲೆಮನ್  ಟ್ರೀ, ರೆಡ್ ಫಾಕ್ಸ್ ಮತ್ತು ಐಬಿಐಎಸ್ ಹೋಟೆಲ್‌ನಲ್ಲಿಯೂ ವ್ಯವಸ್ಥೆ ಮಾಡಲಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು