ಸೋಮವಾರ, ಜೂನ್ 21, 2021
30 °C

ದೆಹಲಿ ಹಿಂಸಾಚಾರ: ಮೃತರ ಕುಟುಂಬಸ್ಥರಿಗೆ ₹10 ಲಕ್ಷ ಪರಿಹಾರ ಘೋಷಿಸಿದ ಕೇಜ್ರಿವಾಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ₹10 ಲಕ್ಷ, ಮನೆ ಕಳೆದುಕೊಂಡವರಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ತಿಳಿಸಿದ್ದಾರೆ.

ಗುರುವಾರ ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಗಲಭೆ ಸಂತ್ರಸ್ತರಿಗೆ ಆಸರೆ ನೀಡಲು ರಾಜ್ಯ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಲಿದೆ. ಗಲಭೆಯಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ತಲಾ ₹ 10 ಲಕ್ಷ, ಮನೆ ಕಳೆದುಕೊಂಡವರಿಗೆ ₹5 ಲಕ್ಷಗಳನ್ನು ಸರ್ಕಾರ ನೀಡಲಿದೆ’ ಎಂದಿದ್ದಾರೆ.

ಗಲಭೆಯಲ್ಲಿ ಗಾಯಗೊಂಡವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅಂತವರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ. 

‘ತಪ್ಪಿತಸ್ಥರು ಯಾರೇ ಆಗಿರಲಿ ಅಂತವರಿಗೆ ಶಿಕ್ಷೆಯಾಗಬೇಕು. ಒಂದು ವೇಳೆ ಆಮ್‌ ಆದ್ಮಿ ಪಕ್ಷದ ಯಾವುದೇ ಮುಖಂಡ ತಪ್ಪು ಮಾಡಿದ್ದರೆ, ಅಂತವರಿಗೆ ಎರಡು ಪಟ್ಟು ಶಿಕ್ಷೆಯಾಗಲಿ. ಈ ವಿಚಾರದಲ್ಲಿ ಯಾವುದೇ ರಾಜಕೀಯ ಬೇಡ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು