ಕೇಜ್ರಿವಾಲ್ ಅಧಿಕಾರಕ್ಕೆ ಬಂದರೆ ಜನರು ಅಭಿವೃದ್ಧಿ ಆಯ್ಕೆ ಮಾಡಿದಂತೆ: ಕಾಂಗ್ರೆಸ್

ನವದೆಹಲಿ: ದೆಹಲಿಯಲ್ಲಿ ಆಮ್ ಆದ್ಮಿಪಕ್ಷದ ಕೇಜ್ರಿವಾಲ್ ಅಧಿಕಾರಕ್ಕೆ ಬಂದರೆ, ಅದು ಅಭಿವೃದ್ಧಿಯನ್ನು ಗುರುತಿಸಿ ಮತದಾರ ನೀಡಿದ ತೀರ್ಪು ಎಂದು ದೆಹಲಿಯ ಕಾಂಗ್ರೆಸ್ ಮುಖಂಡ ಎ.ಆರ್.ಚೌದರಿ ಅಭಿಪ್ರಾಯಪಟ್ಟಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಆಮ್ ಆದ್ಮಿ ಪಕ್ಷದ ಕೇಜ್ರಿವಾಲ್ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ವರದಿ ಬಂದ ನಂತರ ಸುದ್ದಿಗಾರರೊಂದಿಗೆ ಅವರು ಈ ವಿಷಯ ತಿಳಿಸಿದ್ದಾರೆ.
ಇದನ್ನೂ ಓದಿ: ಮತಯಂತ್ರಗಳ ಕೊಠಡಿಗೆ ಕಾರ್ಯಕರ್ತರನ್ನು ಕಾವಲಿಟ್ಟ ಕೇಜ್ರಿವಾಲ್
ಈ ಬಾರಿಯ ದೆಹಲಿ ಚುನಾವಣೆಯಲ್ಲಿ ನಮ್ಮೆಲ್ಲಾ ಶ್ರಮವನ್ನು ಹಾಕಿದ್ದೇವೆ. ಬಿಜೆಪಿ ಎಲ್ಲಾ ಕೋಮುವಾದ ಕಾರ್ಯಸೂಚಿಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡಿದೆ. ಆಮ್ ಆದ್ಮಿ ಪಕ್ಷದ ಕೇಜ್ರಿವಾಲ್ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಮತಕೇಳಿದ್ದರು. ಒಂದು ವೇಳೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಅದು ಜನರು ಅಭಿವೃದ್ಧಿಯನ್ನು ಆಯ್ಕೆ ಮಾಡಿಕೊಂಡಂತೆ ಎಂದು ಎ.ಆರ್. ಚೌದರಿ ಎಂದು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

