ಶುಕ್ರವಾರ, ಜುಲೈ 1, 2022
21 °C

ಅಮಿತ್‌ ಶಾ ಭೇಟಿಯಾದ ಅರವಿಂದ ಕೇಜ್ರಿವಾಲ್‌: ಸಮಾಲೋಚನೆ ಫಲಪ್ರದ ಎಂದು ಟ್ವೀಟ್‌ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಅರವಿಂದ ಕೇಜ್ರಿವಾಲ್‌ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಬುಧವಾರ ಅವರ ಗೃಹ ಕಚೇರಿಯಲ್ಲಿ ಭೇಟಿಯಾದರು. 

ಈ ಮೊದಲು ಕೇಂದ್ರ ಗೃಹ ಇಲಾಖೆ ಕಚೇರಿಯಲ್ಲಿ ನಿಗದಿಗಯಾಗಿದ್ದ ಭೇಟಿಯೂ ನಂತರ ಅಮಿತ್‌ ಶಾ ನಿವಾಸದಲ್ಲಿ ಜರುಗಿತು. ಸುಮಾರು 20 ನಿಮಿಷಗಳ ಕಾಲ ಉಭಯ ನಾಯಕರು ಮಾತುಕತೆ ನಡೆಸಿದರು. 

ಭೇಟಿ ನಂತರ ಟ್ವೀಟ್‌ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ‘ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದೆ. ಉತ್ತಮ ಮತ್ತು ಫಲಪ್ರದ ಭೇಟಿ ಇದಾಗಿತ್ತು. ದೆಹಲಿಗೆ ಸಂಬಂಧಿಸಿದ ಹಲವು ವಿಚಾರಗಳನ್ನು ಚರ್ಚಿಸಿದ್ದೇವೆ. ದೆಹಲಿಯ ಅಭಿವೃದ್ಧಿಗಾಗಿ ಪರಸ್ಪರರು ಜೊತೆಯಾಗಿ ಕೆಲಸ ಮಾಡಲು ಇಬ್ಬರೂ ಒಪ್ಪಿದ್ದೇವೆ’ ಎಂದು ಅವರು ಟ್ವೀಟ್‌ ಮಾಡಿದರು. 

ಇದೇ 11ರಂದು ಪ್ರಕಟವಾಗಿದ್ದ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಯು ಅರವಿಂದ ಕೇಜ್ರಿವಾಲ್‌ ಅವರ ನೇತೃತ್ವದ ಎಎಪಿ ವಿರುದ್ಧ ಹೀನಾಯ ಸೋಲು ಕಂಡಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು