ಸೋಮವಾರ, ಫೆಬ್ರವರಿ 17, 2020
24 °C

ಎದೆಗೆ ಗುಂಡಿಕ್ಕಿದರೂ ದಾಖಲೆ ನೀಡಲಾರೆ: ಅಸಾದುದ್ದೀನ್ ಒವೈಸಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಕರ್ನೂಲ್: ಎದೆಗೆ ಗುಂಡಿಕ್ಕಿದರೂ ದಾಖಲೆ ಪತ್ರಗಳನ್ನು ನೀಡಲಾರೆ ಎಂದು ಆಲ್‌ ಇಂಡಿಯಾ ಮಜ್ಲಿಸ್ ಇತ್ತೆಹಾದುಲ್ ಮುಸ್ಲಿಮೀನ್‌ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಸೋಮವಾರ ಹೇಳಿದ್ದಾರೆ.

ಆಂಧ್ರ ಪ್ರದೇಶದ ಕರ್ನೂಲ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಾನು ಈ ದೇಶದಲ್ಲೇ ಉಳಿಯುತ್ತೇನೆ. ಆದರೆ ದಾಖಲೆ ಪತ್ರಗಳನ್ನು ತೋರಿಸಲಾರೆ. ದಾಖಲೆ ಕೇಳಿದರೆ ನನ್ನ ಎದೆಯನ್ನು ತೋರಿಸಿ ಗುಂಡಿಕ್ಕುವಂತೆ ಹೇಳುತ್ತೇನೆ. ಯಾಕೆಂದರೆ, ನನ್ನ ಹೃದಯದಲ್ಲಿ ಭಾರತದ ಮೇಲಿನ ಪ್ರೀತಿ ಅಡಕವಾಗಿದೆ’ ಎಂದು ಒವೈಸಿ ಹೇಳಿದ್ದಾರೆ.

ಮೋದಿ ಮತ್ತು ಅಮಿತ್ ಶಾ ವಿರುದ್ಧ ಧ್ವನಿಯೆತ್ತುವಂತೆ ಕರೆ ನೀಡಿದ ಒವೈಸಿ, ಅವರ ವಿರುದ್ಧ ದನಿಯೆತ್ತುವವರು ನಿಜಾರ್ಥದಲ್ಲಿ ಹೋರಾಟಗಾರರು ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು