ಶನಿವಾರ, ಜನವರಿ 18, 2020
23 °C

ಸುಪ್ರೀಂ ತೀರ್ಪಿನಿಂದ ಸಂತಸ: ನಿರ್ಭಯಾ ತಾಯಿ ಆಶಾ ದೇವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ಅಪರಾಧಿ ಅಕ್ಷಯ್‌ ಕುಮಾರ್ ಸಿಂಗ್‌ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿರುವುದರಿಂದ ನನಗೆ ಸಂತೋಷವಾಗಿದೆ ಎಂದು ನಿರ್ಭಯಾ ತಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: 

ನ್ಯಾಯಮೂರ್ತಿ ಆರ್.ಭಾನುಮತಿ, ಅಶೋಕ್ ಭೂಷಣ್ ಮತ್ತು ಎಸ್.ಎ.ಬೋಪಣ್ಣ ಒಳಗೊಂಡ ನ್ಯಾಯಪೀಠ ಮರುಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ್ದು, ಅಪರಾಧಿಯ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿ ಮರುಪರಿಶೀಲನಾ ಅರ್ಜಿಯನ್ನು  ತಿರಸ್ಕರಿಸಿತು.

ತೀರ್ಪಿನ ಬಳಿಕ ನಿರ್ಭಯಾ ತಾಯಿ ಆಶಾ ದೇವಿ ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಪ್ರತಿಕ್ರಿಯೆಯಲ್ಲಿ 'ಸುಪ್ರೀಂ ಕೋರ್ಟ್ ಮರುಪರಿಶೀಲನಾ ಅರ್ಜಿ ತಿರಸ್ಕರಿಸಿರುವುದು ನನಗೆ ಸಂತಸ ತಂದಿದೆ' ಎಂದು ಅವರು ಹೇಳಿದ್ದಾರೆ. 

ಇದನ್ನೂ ಓದಿ: ನಿರ್ಭಯಾ ಅತ್ಯಾಚಾರ ಪ್ರಕರಣ: ಅಂದಿನಿಂದ ಇಂದಿನವರೆಗೆ ಏನೇನಾಯ್ತು?

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು