ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ‌: ಆಶಾ ಕಾರ್ಯಕರ್ತರ ವೇತನ ₹2000 ಹೆಚ್ಚಿಸಲು ಚಿಂತನೆ

Last Updated 25 ಜೂನ್ 2020, 8:38 IST
ಅಕ್ಷರ ಗಾತ್ರ

ಮುಂಬೈ: ಕೋವಿಡ್ ಬಿಕ್ಕಟಿನ ವೇಳೆಯಲ್ಲೂ ಶ್ರಮವಹಿಸಿ ದುಡಿಯುತ್ತಿರುವ ಆಶಾ ಕಾರ್ಯಕರ್ತರ ಮಾಸಿಕ ವೇತನವನ್ನು ₹2000 ಹೆಚ್ಚಳ ಮಾಡಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಮಹಾರಾಷ್ಟ್ರದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿತರ ಬಗ್ಗೆ ನಿಗಾವಹಿಸುವ ಕಾರ್ಯವನ್ನು ಆಶಾ ಕಾರ್ಯಕರ್ತರಿಗೆ ನೀಡಲಾಗಿದೆ. ಇವರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರೋತ್ಸಾಹಧನ ರೂಪದಲ್ಲಿ₹2000 ಹೆಚ್ಚಳ ಮಾಡಲುಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್‌ ತೊಪೆ ಅವರು ಪ್ರಸ್ತಾವ ಸಿದ್ಧಪಡಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಆಶಾ ಕಾರ್ಯಕರ್ತರಿಗೆ ಸದ್ಯ ಪ್ರತಿ ತಿಂಗಳು ₹10,000 ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT