ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ ಪ್ರವಾಹ: 43 ಲಕ್ಷ ಜನ ಸಂಕಷ್ಟಕ್ಕೆ, ಕಾಜಿರಂಗಾ ಉದ್ಯಾನಕ್ಕೆ ಭಾರೀ ಹಾನಿ

Last Updated 16 ಜುಲೈ 2019, 1:57 IST
ಅಕ್ಷರ ಗಾತ್ರ

ನವದೆಹಲಿ: ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಮುಂದುವರಿದಿದ್ದುಕಾಜಿರಂಗಾ ರಾಷ್ಟ್ರೀಯ ಉದ್ಯಾನವನದ ಶೇ 95 ಭಾಗ ಹಾನಿಗೊಳಗಾಗಿದೆ’ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಮಂಡಳಿ ತಿಳಿಸಿದೆ.

ಅಸ್ಸಾಂನಲ್ಲಿಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು. ಈ ತನಕ 43 ಲಕ್ಷ ಜನರು ಕಷ್ಟಕ್ಕೆ ಸಿಲುಕಿದ್ದಾರೆ.ರಾಜ್ಯದ 33 ಜಿಲ್ಲೆಗಳಲ್ಲಿ 31 ಜಿಲ್ಲೆ ಪ್ರವಾಹದಿಂದ ಹಾನಿಗೀಡಾಗಿವೆ ಎಂದುಪ್ರವಾಹ ಕುರಿತು ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.ಪರಿಸ್ಥಿತಿ ನಿರ್ವಹಿಸಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಮೋದಿ ಭರವಸೆ ನೀಡಿದ್ದಾರೆ.

‘ಪ್ರವಾಹದಿಂದ ಅತಿಹೆಚ್ಚು ಹಾನಿಗೀಡಾಗಿರುವ ಜಿಲ್ಲೆ ಬಾರಪೇಟಾ ಆಗಿದ್ದು, ಇಲ್ಲಿ 7.35 ಲಕ್ಷ ಜನರು ಸಂಕಷ್ಟದಕ್ಕೆ ಸಿಲುಕಿದ್ದಾರೆ. ಮಾರಿಗಾಂವ್‌ನಲ್ಲಿ 3.50 ಲಕ್ಷ, ಧುಬ್ರಿಯಲ್ಲಿ 3.38 ಲಕ್ಷ ಜನರು ತೊಂದರೆಗೀಡಾಗಿದ್ದಾರೆ. ಕಾಜಿರಂಗಾ ರಾಷ್ಟ್ರೀಯ ಉದ್ಯಾನವನ ಶೇ 95 ಭಾಗ ಹಾನಿಗೊಳಗಾಗಿದೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಮಂಡಳಿ ತಿಳಿಸಿದೆ.

ಪ್ರವಾಹ ಪೀಡಿತ ಜನರಿಗೆ 7 ದಿನಗಳ ಪರಿಹಾರ ನೀಡುವುದಾಗಿ ಅಧಿಕಾರಿಗಳು ಘೋಷಿಸಿದ್ದಾರೆ. ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಮೇಘಾಲಯದ ಪಶ್ಚಿಮ ಗಾರೊ ಗುಡ್ಡಗಾಡು ಜಿಲ್ಲೆಯಲ್ಲಿ ಪ್ರವಾಹದಿಂದ ಕನಿಷ್ಠ 1.14 ಲಕ್ಷ ಜನರು ತೊಂದರೆಗೀಡಾಗಿದ್ದಾರೆ. ಮಣಿಪುರ, ಮಿಜೋರಾಂನಲ್ಲೂ ಪ್ರವಾಹ ಸ್ಥಿತಿ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT