ಶುಕ್ರವಾರ, ಫೆಬ್ರವರಿ 21, 2020
31 °C
ಸರ್ಕಾರದ ಸುತ್ತೋಲೆ

ಅಸ್ಸಾಂ | ಸರ್ಕಾರಿ ಉದ್ಯೋಗಿಗಳು ರಾಜಕೀಯ ಪ್ರೇರಿತ ಪೋಸ್ಟ್ ಹಾಕಿದರೆ ಶಿಸ್ತಕ್ರಮ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

prajavani

ನವದೆಹಲಿ:  ಅಸ್ಸಾಂನ ಸರ್ಕಾರಿ ಉದ್ಯೋಗಿಗಳು ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪ್ರೇರಿತ ಪೋಸ್ಟ್‌ ಹಾಕಿದರೆ, ಶಿಸ್ತುಕ್ರಮಕ್ಕೆ ಗುರಿಯಾಗಬೇಕಾಗುತ್ತದೆ.

ಅಸ್ಸಾಂ ಸರ್ಕಾರದ ಕಾರ್ಯದರ್ಶಿ ಹಾಗೂ ಆಯುಕ್ತರ ಸೂಚನೆ ಮೇರೆಗೆ ಅಲ್ಲಿನ ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ಹೊರಡಿಸಿರುವ ಸುತ್ತೋಲೆ ಈ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅನೇಕರ ಟೀಕೆಗೆ ಗುರಿಯಾಗಿದೆ.

ಅಸ್ಸಾಂ ಸೇವೆಗಳ ನಿಯಮ, 1961 ಉಲ್ಲಂಘಿಸಿ  ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ಟ್ವಿಟ್ಟರ್‌, ವಾಟ್ಸ್‌ಆ್ಯಪ್, ಇನ್‌ಸ್ಟಾಗ್ರಾಂ ಮತ್ತು ಇತರೆ ವೇದಿಕೆಗಳಲ್ಲಿ ರಾಜಕೀಯ ಪ್ರೇರಿತ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. 

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ಅಸ್ಸಾಂನಲ್ಲಿ ಸಾಕಷ್ಟು ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಸರ್ಕಾರ ಈ ಸುತ್ತೋಲೆಯನ್ನು ಹೊರಡಿಸಿದೆ. ರಾಜ್ಯದಲ್ಲಿ ಭಾರಿ ಸಂಖ್ಯೆಯಲ್ಲಿ ನೆಲೆಸಿರುವ ಬಂಗಾಳದಿಂದ ಅಕ್ರಮವಾಗಿ ವಲಸೆ ಬಂದಿರುವ ಹಿಂದೂಗಳಿಗೆ ಸಿಎಎಯಿಂದ ಅನುಕೂಲವಾಗುತ್ತದೆ ಎನ್ನುವುದು ಮೂಲ ಅಸ್ಸಾಮಿಗರ ಆಕ್ಷೇಪವಾಗಿದೆ.

ಬಂಗಾಳಿ ಮಾತನಾಡುವ ಹಿಂದೂ ವಲಸಿಗರಿಗೆ ಪೌರತ್ವ ನೀಡಿದರೆ, ಅವರ ಸಂಖ್ಯೆ ರಾಜ್ಯದ ಮೂಲ ನಿವಾಸಿಗರಾದ ಅಸ್ಸಾಮಿ ಮಾತನಾಡುವವರನ್ನು ಮೀರುತ್ತದೆ  ಎನ್ನುವ ಆತಂಕವೂ ಇಲ್ಲಿನ ಜನರಲ್ಲಿದೆ. 

ಅನೇಕ ಟ್ವಿಟ್ಟರ್‌ ಬಳಕೆದಾರರು ಈ ಸುತ್ತೋಲೆಯನ್ನು ಶೇರ್ ಮಾಡಿ, ಉದ್ಯೋಗಿಗಳ ಮೇಲೆ ನಿರ್ಬಂಧ ಹೇರುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. 

ಸಿಎಎ ಕುರಿತು ತಮ್ಮ ಅಭಿಪ್ರಾಯ ಹೇಳುವವರು ಶಿಕ್ಷೆಗೆ ಗುರಿಯಾಗುತ್ತಾರೆ. ಡಿಸೆಂಬರ್‌ 18ರಂದು ಕಾಯ್ದೆ ವಿರೋಧಿಸಿ ಸುಮಾರು 4 ಲಕ್ಷ ಉದ್ಯೋಗಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದು ಸರ್ಕಾರಕ್ಕೆ ಆತಂಕವಾಗಿದೆ ಎಂದು ಅನುಪಮ್‌ ಎಂಬುವವರು ಟ್ವೀಟ್‌ ಮಾಡಿದ್ದಾರೆ.
 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು