ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಕ್ತಿ ಮೇಲೆ ಹಲ್ಲೆ: ಎಎಪಿ ಶಾಸಕ ಸೋಮ್‌ ದತ್‌ ದೋಷಿ

Last Updated 30 ಜೂನ್ 2019, 20:00 IST
ಅಕ್ಷರ ಗಾತ್ರ

ನವದೆಹಲಿ: 2015ರ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಎಎಪಿ ಶಾಸಕ ಸೋಮ್‌ ದತ್‌ ಅವರನ್ನು ದೋಷಿ ಎಂದು ದೆಹಲಿ ಕೋರ್ಟ್‌ ಘೋಷಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್‌ ಸಮರ್‌ ವಿಶಾಲ್ ಅವರು, ಸರ್ದಾರ್‌ ಬಜಾರ್ ಕ್ಷೇತ್ರದ ಶಾಸಕ ದತ್‌ ತಪ್ಪೆಸಗಿದ್ದಾರೆ ಎಂದು ತೀರ್ಪು ನೀಡಿದ್ದಾರೆ.

2015ರ ಜನವರಿ 10ರಂದು ಸೋಮ್‌ ದತ್‌ ಹಾಗೂ ಅವರ 50 ಬೆಂಬಲಿಗರು ಪ್ಲಾಟ್‌ ನಂಬರ್‌ 13ಕ್ಕೆ ಹೋಗಿ ದೂರುದಾರ ಹಾಗೂ ಅವರ ಅವಲಂಬಿತರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿರುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದು ಕೋರ್ಟ್ ಹೇಳಿದೆ.

ಈ ಪ್ರಕರಣದಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾಗಿದ್ದು, ಜುಲೈ 4ರಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT