ಶುಕ್ರವಾರ, ಜನವರಿ 17, 2020
22 °C

ರಾಷ್ಟ್ರಗೀತೆ ಹಾಡಿ ಹೊಸ ವರ್ಷ ಸ್ವಾಗತಿಸಿದ ಸಿಎಎ ವಿರೋಧಿ ಪ್ರತಿಭಟನಾಕಾರರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಹಾಗೂ ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ಪ್ರತಿಭಟನೆಕಾರರು ರಾಷ್ಟ್ರಗೀತೆ ಹಾಡುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.

ಇಲ್ಲಿನ ಜಾಮೀಯಾ ಮಸೀದಿ ಸಮೀಪದಲ್ಲಿರುವ ಶಾಹಿನ್‌ ಬಾಗ್‌ ಮೈದಾನದಲ್ಲಿ ಕಳೆದ ಡಿಸೆಂಬರ್‌ 15ರಿಂದ ಪೌರತ್ವ (ತಿದ್ದುಪಡಿ) ಕಾಯ್ದೆ ಹಾಗೂ ಎನ್‌ಆರ್‌ಸಿ ವಿರೋಧಿಸಿ ಸಾವಿರಾರು ಜನರು ಹಗಲು ರಾತ್ರಿ ಪ್ರತಿಭಟನೆ ಮಾಡುತ್ತಿದ್ದಾರೆ. ನಿನ್ನೆ ರಾತ್ರಿ ಅಪಾರ ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರು 12 ಗಂಟೆ ಆಗುತ್ತಿದ್ದಂತೆ ಗಟ್ಟಿಯಾಗಿ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.

ಆಜಾದಿ ಎಂಬ ನಾಮಫಲಕಗಳನ್ನು ಹಿಡಿದಿದ್ದ ಹಲವರು ಇನ್‌ಕ್ವಿಲಾಬ್‌ ಜಿಂದಾಬಾದ್‌ ಎಂಬ ಘೋಷಣೆಗಳನ್ನು ಕೂಗುತ್ತಿದ್ದರು. ಕಲಾವಿದರು, ನಟರು, ಬರಹಗಾರರು ಸೇರಿದಂತೆ ವಿವಿಧ ವೃತ್ತಿಗಳಲ್ಲಿ ತೊಡಗಿರುವ ವೃತ್ತಿಪರರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಳೆದ 15 ದಿನಗಳಿಂದ ಇಲ್ಲಿ ಹಗಲು ರಾತ್ರಿ ಪ್ರತಿಭಟನೆ ನಡೆಯುತ್ತಿದೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು