ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಜಪೇಯಿ ಜನ್ಮದಿನ: ಪ್ರಧಾನಿ ಮೋದಿ, ಅಮಿತ್ ಶಾ, ಕೋವಿಂದ್ ಸೇರಿ ಗಣ್ಯರಿಂದ ಗೌರವ

Last Updated 25 ಡಿಸೆಂಬರ್ 2019, 5:18 IST
ಅಕ್ಷರ ಗಾತ್ರ

ನವದೆಹಲಿ:ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಜನ್ಮದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಗೃಹ ಸಚಿವ ಅಮಿತ್ ಶಾ, ಪ್ರತಿಪಕ್ಷ ಕಾಂಗ್ರೆಸ್‌ ನಾಯಕರು ಸೇರಿದಂತೆ ಅನೇಕ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.

ಮೋದಿ, ಕೋವಿಂದ್, ಶಾ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ‘ಸದೈವ್ ಅಟಲ್’ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ್ದಾರೆ.

‘ಅಟಲ್‌ಜೀಯವರ ಜನ್ಮ ದಿನದ ಸಂದರ್ಭದಲ್ಲಿ ವಿನೀತನಾಗಿಅವರನ್ನು ನೆನಪಿಸಿಕೊಳ್ಳುತ್ತಿದ್ದೇನೆ ಮತ್ತು ಗೌರವಾರ್ಪಣೆ ಮಾಡುತ್ತಿದ್ದೇನೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಜತೆಗೆ, ಅಟಲ್ ಅವರ ಸಾಧನೆಗಳನ್ನು ಉಲ್ಲೇಖಿಸಿ ಕೊಂಡಾಡಿದ್ದಾರೆ.

ಜನ್ಮದಿನದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ನಮನಗಳು ಎಂದು ಕಾಂಗ್ರೆಸ್‌ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್, ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಸೇರಿ ಅನೇಕರು ಟ್ವೀಟ್‌ ಮೂಲಕ ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿದ್ದಾರೆ.

ವಾಜಪೇಯಿಯವರ ರಾಜಕೀಯ ಜೀವನದಲ್ಲಿ ಮಹತ್ವದ ಪಾತ್ರ ವಹಿಸಿದ್ದು ಲಖನೌ ಲೋಕಸಭಾ ಕ್ಷೇತ್ರ. ಈ ಹಿನ್ನೆಲೆಯಲ್ಲಿ ಲಖನೌ ಲೋಕಭವನದಲ್ಲಿ ಸ್ಥಾಪಿಸಲಾಗಿರುವ ವಾಜಪೇಯಿ ಅವರ ಕಂಚಿನ ಪ್ರತಿಮೆಯನ್ನು ಮೋದಿಯವರು ಇಂದು ಅನಾವರಣಗೊಳಿಸಲಿದ್ದಾರೆ. ಜತೆಗೆ,ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT