ಭಾನುವಾರ, ಆಗಸ್ಟ್ 18, 2019
24 °C

ಪ್ರಥಮ ಪುಣ್ಯತಿಥಿಯಂದು ವಾಜಪೇಯಿಗೆ ಬಿಜೆಪಿ ಗೌರವ

Published:
Updated:

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಮೊದಲ ವರ್ಷದ ಪುಣ್ಯತಿಥಿಯಂದು ಪಕ್ಷದ ವತಿಯಿಂದ ಗೌರವ ಸಲ್ಲಿಸಲು ಭಾರತೀಯ ಜನತಾ ಪಕ್ಷ ನಿರ್ಧರಿಸಿದೆ. ಬಿಜೆಪಿಯ ಹಿರಿಯ ನಾಯಕರಾಗಿದ್ದ ವಾಜಪೇಯಿ ಅವರು 2018ರ ಆಗಸ್ಟ್ 16ರಂದು ಮೃತಪಟ್ಟಿದ್ದರು. 

ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷದ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಪ್ರಥಮ ಪುಣ್ಯತಿಥಿ ಸಂದರ್ಭ ಬಿಜೆಪಿ ಕಾರ್ಯಕರ್ತರ ಕುಟುಂಬದ ಎಲ್ಲರೂ ವಾಜಪೇಯಿ ಅವರನ್ನು ನೆನಪಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ವಾಜಪೇಯಿ ನೆನಪಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ದೇಶದ ಎಲ್ಲ ಜಿಲ್ಲಾ ಘಟಕಗಳಿಗೂ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲು ಸೂಚಿಸಲಾಗುವುದು ಎಂದು ಹಿರಿಯ ನಾಯಕರು ಹೇಳಿದ್ದಾರೆ.

Post Comments (+)