ಗುರುವಾರ , ಫೆಬ್ರವರಿ 20, 2020
20 °C

ಅತ್ಯಾಚಾರ ಸಂತ್ರಸ್ತೆ ಸಜೀವ ದಹನಕ್ಕೆ ಯತ್ನ

ಪ್ರಜಾವಾಣಿ ವಾರ್ತೆ ‌ Updated:

ಅಕ್ಷರ ಗಾತ್ರ : | |

ಲಖನೌ: ಉನ್ನಾವ್‌ನಲ್ಲಿ ಅತ್ಯಾಚಾರ ಸಂತ್ರಸ್ತೆ ಸುಟ್ಟ ಗಾಯಗಳಿಂದಾಗಿ ಮೃತಪಟ್ಟ ಘಟನೆ ನಡೆದ ಬೆನ್ನಲ್ಲೇ, ಶನಿವಾರ ಫತೇಪುರದಲ್ಲಿ ಮತ್ತೊಬ್ಬ ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿರುವ ಪ್ರಕರಣ ನಡೆದಿದೆ.

‘ಸಂತ್ರಸ್ತೆಗೆ ಶೇ 90ರಷ್ಟು ಸುಟ್ಟ ಗಾಯಗಳಾಗಿದೆ. ಹೆಚ್ಚಿನ ಚಿಕಿತ್ಸೆಗೆ ಕಾನ್ಪುರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ನೆರೆಯಲ್ಲಿ ವಾಸಿಸುತ್ತಿದ್ದ ಮೆವಾ ಲಾಲ್ ನನ್ನನ್ನು ಲೈಂಗಿಕವಾಗಿ ಶೋಷಿಸಿದ್ದ. ಪೊಲೀಸರ ಬಳಿ ದೂರು ದಾಖಲಿಸುವುದಾಗಿ ನಾನು ಹೇಳಿದ ಬಳಿಕ, ಆತ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ’ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಆರೋಪಿ ನಾಪತ್ತೆಯಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ‘ಆರೋಪಿ ಜತೆ ಯುವತಿ ಸಂಬಂಧ ಹೊಂದಿರುವ ಸಾಧ್ಯತೆ ಇದೆ. ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ ಆಕೆ ಬೆಂಕಿ ಹಚ್ಚಿಕೊಂಡಿರಬಹುದು’ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು