ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಲಸೆ ಕಾರ್ಮಿಕರಿಗೆ ಬಸ್ ಸೌಲಭ್ಯ ಕಲ್ಪಿಸದ್ದಕ್ಕೆ ಪ್ರಿಯಾಂಕಾ ಗಾಂಧಿ ಆಕ್ರೋಶ

Last Updated 16 ಮೇ 2020, 8:52 IST
ಅಕ್ಷರ ಗಾತ್ರ

ಲಖನೌ: ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡಿಕೊಡಲು ವಿಫಲವಾದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಔರೇಯಾ ಎಂಬಲ್ಲಿ ಟ್ರಕ್‌ಗಳು ಡಿಕ್ಕಿಯಾಗಿ 24 ವಲಸೆ ಕಾರ್ಮಿಕರು ಮೃತಪಟ್ಟ ಬಗ್ಗೆ ಉಲ್ಲೇಖಿಸಿದ ಅವರು, ಸರ್ಕಾರ ಎಲ್ಲವನ್ನೂ ಮರೆತಿದೆ ಎಂದು ಟೀಕಿಸಿದ್ದಾರೆ.

‘ವಲಸೆ ಕಾರ್ಮಿಕರು ಮನೆಗಳಿಗೆ ಮರಳಲು ಸರ್ಕಾರ ವ್ಯವಸ್ಥೆ ಮಾಡಿಕೊಡುತ್ತಿಲ್ಲ ಯಾಕೆ ಎಂಬುದನ್ನು ಈ ಹೃದಯವಿದ್ರಾವಕ ಘಟನೆ ಮತ್ತೊಮ್ಮೆ ಪ್ರಶ್ನಿಸುವಂತೆ ಮಾಡಿದೆ. ವಲಸೆ ಕಾರ್ಮಿಕರನ್ನು ರಾಜ್ಯದೊಳಕ್ಕೆ ಕರೆದುಕೊಂಡು ಬರಲು ಬಸ್‌ಗಳು ಯಾಕೆ ಸಂಚರಿಸುತ್ತಿಲ್ಲ. ಸರ್ಕಾರಕ್ಕೆ ಇದ್ಯಾವುದೂ ಕಾಣಿಸುತ್ತಿಲ್ಲವೇ?’ ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.

‘ಹೇಳಿಕೆ ನೀಡುವುದಷ್ಟೇ ಸರ್ಕಾರದ ಕೆಲಸವೇ? ಎಲ್ಲವನ್ನೂ ನೋಡಿದ ಬಳಿಕವೂ ಅವರು ಸುಮ್ಮನಾಗುತ್ತಾರೆ’ ಎಂದು ಅವರು ಟೀಕಿಸಿದ್ದಾರೆ.

ವಲಸೆ ಕಾರ್ಮಿಕರಿಗೆ ಸರಿಯಾದ ವ್ಯವಸ್ಥೆ ಕಲ್ಪಸದಿರುವ ಬಗ್ಗೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶನಿವಾರ ಬೆಳಿಗ್ಗೆ ಉತ್ತರ ಪ್ರದೇಶದ ಔರೇಯಾ ಎಂಬಲ್ಲಿ ಟ್ರಕ್‌ಗಳು ಡಿಕ್ಕಿಯಾಗಿ 24 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT